ಹೊಸದಿಗಂತ ಡಿಜಿಟಲ್ ಡೆಸ್ಕ್:
ಎರಡಕ್ಕಿಂತ ಹೆಚ್ಚು ಮಕ್ಕಳಿರುವವರು ಚುನಾಚಣೆಯಲ್ಲಿ ಸ್ಪರ್ಧಿಸೋಕೆ ಆಗೋದಿಲ್ಲ ಎಂದು ತಮ್ಮ ಮೂರನೇ ಮಗಳನ್ನು ವ್ಯಕ್ತಿಯೊಬ್ಬ ಕೊಂದಿದ್ದಾನೆ.
ಮಹಾರಾಷ್ಟ್ರದ ವ್ಯಕ್ತಿಯಾದ ಪಾಂಡುರಂಗ ಕೊಂಡ್ಮಂಗಳೇ ತನ್ನ ಆರು ವರ್ಷದ ಮಗಳು ಪ್ರಾಚಿಯನ್ನು ತೆಲಂಗಾಣದ ನಿಜಾಮಾಬಾದ್‌ನ ಬೋಧನ್ ಕಾಲುವೆ ನೂಕಿ ಹತ್ಯೆ ಮಾಡಿದ್ದಾನೆ.
ಈತ ನಾಂದೇಡ್‌ನ ಕೆರೂರ್ ನಿವಾಸಿಯಾಗಿದ್ದು, ಗ್ರಾಮ ಪಂಚಾಯತಿ ಎಲೆಕ್ಷನ್‌ಗೆ ನಿಲ್ಲಲು ತಯಾರಿ ನಡೆಸಿದ್ದ. ನಿಜಾಮಾಬಾದ್ ಪೊಲೀಸರು ಪ್ರಕರಣದ ಆರೋಪಿ ಪಾಂಡುರಂಗ ಮತ್ತು ಗ್ರಾಮದ ಸರಪಂಚ್ ಗಣೇಶ್ ರಾಮಚಂದ್ರ ಶಿಂಧೆಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ನಿಜಾಮಾಬಾದ್ ಪೊಲೀಸ್ ಆಯುಕ್ತ ಪಿ. ಸಾಯಿ ಚೈತನ್ಯ, ಕೆಲವು ದಿನಗಳ ಹಿಂದೆ ಯೆಡಪಲ್ಲಿಯ ನಿಜಾಮ ಸಾಗರ್ ಕಾಲುವೆಯಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಪೊಲೀಸರು ಆಕೆಯ ತಂದೆಯನ್ನು ವಿಚಾರಣೆ ನಡೆಸಿದ್ದರು. ಈ ವೇಳೆ ಆಕೆ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿ ಪೊಲೀಸರನ್ನು ದಾರಿ ತಪ್ಪಿಸಲು ಪ್ರಯತ್ನಿಸಿದ್ದ. ತನಿಖಾಧಿಕಾರಿ ವಿಚಾರಣೆ ನಡೆಸಿದಾಗ, ಮಗಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ.



