ಮದುವೆ ಮನೆಯಲ್ಲಿ ನೃತ್ಯ ಮಾಡುವಾಗಲೇ ಸಾವಿಗೀಡಾದ ವ್ಯಕ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇತ್ತೀಚಿನ ದಿನಗಳಲ್ಲಿಏಕಾಏಕಿ ಹೃದಯಾಘಾತ ಸಂಭವಿಸಿ ಮೃತಪಡುತ್ತಿರುವ ಘಟನೆಗಳು ಹೆಚ್ಚಾಗಿದೆ. ಸಂಭ್ರಮ, ಸಂತಸದಲ್ಲಿರುವಾಗಲೇ ಇಂಥ ಸಾವುಗಳು ಸಂಭವಿಸುತ್ತಿದ್ದು, ಇದೀಗ ಹೃದಯಾಘಾತವಾಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯ ಡೊಂಗರಗಢದಲ್ಲಿ ಈ ಘಟನೆ ನಡೆದಿದ್ದು, ಮದುವೆ ಮನೆಯ ವೇದಿಕೆಯಲ್ಲಿ ಸಂಭ್ರಮದಿಂದ ನೃತ್ಯ ಮಾಡುವ ವೇಳೆ ವ್ಯಕ್ತಿಯು ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಎಲೆಕ್ಟ್ರಿಕಲ್ ವಿಭಾಗದ ಉದ್ಯೋಗಿಯಾಗಿದ್ದ ದಿಲೀಪ್ ರೌಜ್ಕರ್ ಛತ್ತೀಸ್‌ಗಢದ ಬಲೋದ್ ಜಿಲ್ಲೆಯ ನಿವಾಸಿಯಾಗಿದ್ದರು. ಅವರು ಇತ್ತೀಚೆಗೆ ತಮ್ಮ ಸಂಬಂಧಿಕರೊಬ್ಬರ ಮದುವೆಗೆ ಹೋಗಿದ್ದು, ಅಲ್ಲಿ ತನ್ನ ಆತ್ಮೀಯರೊಂದಿಗೆ ಮದುವೆ ವೇದಿಕೆಯಲ್ಲಿ ಡ್ಯಾನ್ಸ್‌ ಮಾಡಿದ್ದಾರೆ. ಬಹಳ ಸಂತಸದಿಂದ ಭಿನ್ನ – ವಿಭಿನ್ನವಾಗಿ ಹಾಡಿಗೆ ಹೆಜ್ಜೆ ಹಾಕಿದ ಅವರು ಸುಸ್ತಾಗಿ ವೇದಿಕೆಯಲ್ಲೇ ಕೂತಿದ್ದಾರೆ. ಇದಾದ ಬಳಿಕ ಕೆಲವೇ ಸೆಕೆಂಡ್‌ ಗಳಲ್ಲಿ ಕೂತಲೇ ಕುಸಿದು ಬಿದ್ದಿದ್ದಾರೆ.

ಕುಸಿದ ದಿಲೀಪ್‌ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!