ಹೊಸದಿಗಂತ ವರದಿ, ಹುಬ್ಬಳ್ಳಿ
ಪೋಕ್ಸೊ ಪ್ರಕರಣದಡಿ ಹುಬ್ಬಳ್ಳಿಯ ಘಂಟಿಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣವೊಂದು ದಾಖಲಾಗಿದ್ದು, ಇದರ ವಿವರಗಳು ನಾಗರಿಕ ಸಮಾಜ ತಲೆತಗ್ಗಿಸುವಂತಿದೆ.
ತನ್ನ ಪಕ್ಕದ ಮನೆಯ ಮೂರು ವರ್ಷದ ಮಗುವಿನ ಮೇಲೆ ಆರೋಪಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂಬ ದೂರು ಇದು. ಮಗುವಿನ ಕುಟುಂಬದವರು ಇಂಥದೊಂದು ದೂರು ನೀಡಿದ್ದಾರೆ. ಆರೋಪಿಯು ಮಗುವನ್ನು ಬೇರೆಡೆಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎಂಬುದು ಕುಟುಂಬಸ್ಥರು ಮಾಡಿರುವ ಆರೋಪ.
ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ ತಿಳಿಸಿದ್ದಾರೆ.