ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಶಿವಮೊಗ್ಗ:
ಬಾವಿಗೆ ಬಿದ್ದ ವ್ಯಕ್ತಿಯನ್ನು ಅಗ್ನಿ ಶಾಮಕ ದಳ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ತೀರ್ಥಹಳ್ಳಿ ತಾಲೂಕು ನಾಯದವಳ್ಳಿಯಲ್ಲಿ ಸೋಮವಾರ ನಡೆದಿದೆ.
ನಾಯದಹಳ್ಳಿಯ ಸುಂದರೇಶ್ (60) ಅವರನ್ನು ರಕ್ಷಣೆ ಮಾಡಲಾಗಿದ್ದು, ಬೆಳಗ್ಗೆ ಬಾವಿ ಬಳಿ ತೆರಳಿದ್ದ ಇವರು ಆಯ ತಪ್ಪಿ ಬಿದ್ದಿದ್ದರು. ನೀರು ಕಡಿಮೆ ಇದ್ದ ಪರಿಣಾಮ ಬಾವಿಗೆ ಕಟ್ಟಿದ್ದ ಕಲ್ಲು ಹಿಡಿದುಕೊಂಡು ಜೀವರಕ್ಷಣೆ ಮಾಡಿಕೊಂಡಿದ್ದರು.
ಮಾಹಿತಿ ತಿಳಿದ ತೀರ್ಥಹಳ್ಳಿ ಅಗ್ನಿಶಾಮಕ ಠಾಣೆ ಸಿಬ್ಬಂದಿ ತ್ವರಿತ ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನು ಬಾವಿಯಿಂದ ಮೇಲಕ್ಕೆತ್ತಿ ಪ್ರಾಣರಕ್ಷಣೆ ಮಾಡಿದ್ದಾರೆ.
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಸಿಬ್ಬಂದಿಯವರಾದ ಹರಿಪ್ರಸಾದ್ ಶೆಟ್ಟಿಗಾರ್, ರೋಹಿತ್, ಕೆ. ಆರ್ ಮಂಜುನಾಥ್, ರಾಘವೇಂದ್ರ, ಸಂಜು ನಾಯ್ಕ ಹಾಗೂ ಗೃಹರಕ್ಷಕ ಸಿಬ್ಬಂದಿಯವರಾದ ಕಾರ್ತಿಕ್, ಕಿರಣ್ ಪಾಲ್ಗೊಂಡಿದ್ದರು.