ಹೊಸದಿಗಂತ ಡಿಜಿಟಲ್ ಡೆಸ್ಕ್
ಕಳೆದ ಜನವರಿಯಲ್ಲಿ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನಿಗೆ ರಾಜಸ್ಥಾನದ ಪಾಲಿ ಜಿಲ್ಲೆಯ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ.
ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶ ಸುರೇಂದ್ರ ಕುಮಾರ್ ಅವರು ಆರೋಪಿ ನರ್ಪತ್ ಸಿಂಗ್ (22) ಗೆ 1 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಪ್ರಕರಣಗಳಿಗೆ ಸಂಬಂಧಿಸಿದಂತೆ ವ್ಯವಹರಿಸುತ್ತಿರುವ ನ್ಯಾಯಾಲಯವು ಸಿಂಗ್ ಅಪರಾಧಿ ಎಂದು ಪರಿಗಣಿಸಿದ ಬಳಿಕ ಮರಣದಂಡನೆ ಶಿಕ್ಷೆ ವಿಧಿಸಿದೆ ಎಂದು ಬಾಲಕಿಯ ಕುಟುಂಬದ ವಕೀಲ ಕಮಲೇಶ್ ದಿಯೋರಾ ಹೇಳಿದ್ದಾರೆ.
ಸಿಂಗ್ ಆಕೆಯ ಮೇಲೆ ಅತ್ಯಾಚಾರ ಎಸಗಿ ಕತ್ತು ಹಿಸುಕಿ ನಂತರ ಕೋಲಿನಿಂದ ಹೊಡೆದು ಕೊಂದಿದ್ದ. ಆ ಬಳಿಕ ಬಾಲಕಿಯ ದೇಹವು ಬಾವಿಯಲ್ಲಿ ಪತ್ತೆಯಾಗಿತ್ತು.
ಫೆಬ್ರವರಿಯಲ್ಲಿ ಆರೋಪಿ ವಿರುದ್ಧ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಯಿತು. ಆ ಬಳಿಕ ಆತನನ್ನು ಜೈಲಿಗೆ ಕಳುಹಿಸಲಾಗಿತ್ತು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ