Wednesday, December 6, 2023

Latest Posts

ರಾಜಸ್ಥಾನದಲ್ಲಿ ಗುಂಡಿನ ದಾಳಿ: ಓರ್ವ ಸಾವು, 48 ಗಂಟೆಗಳ ಕಾಲ ಇಂಟರ್ನೆಟ್ ಸ್ಥಗಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜಸ್ಥಾನದ ಬಿಲ್ವಾರಾದಲ್ಲಿ ಇಬ್ಬರು ಮುಸ್ಲಿಂ ಸಹೋದರರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದು, ಉದ್ವಿಗ್ನ ವಾತಾವರಣ ಸೃಷ್ಟಿಸಿದೆ. ಬೈಕ್ ನಲ್ಲಿ ಬಂದ ನಾಲ್ವರು ಇಬ್ಬರ ಮೇಲೆ ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ಇಬ್ಬರಿಗೂ ಗುಂಡು ತಗುಲಿದೆ.

ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಒಬ್ಬರು ಮೃತಪಟ್ಟಿದ್ದು, ಆಕ್ರೋಶಗೊಂಡ ಕುಟುಂಬ ಸದಸ್ಯರು ಆಸ್ಪತ್ರೆಯನ್ನು ಧ್ವಂಸಗೊಳಿಸಿದ್ದಾರೆ. ಮತ್ತೊಬ್ಬ ಗಾಯಗೊಂಡ ವ್ಯಕ್ತಿಯನ್ನು ಉದಯಪುರ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಈ ಹಿಂದೆ ನಡೆದ ಆದರ್ಶ್ ತಪಾಡಿಯಾ ಎಂಬಾತನ ಕೊಲೆಗೆ ಪ್ರತೀಕಾರವಾಗಿ ಈ ದಾಳಿಯಾಗಿದೆ ಎನ್ನಲಾಗುತ್ತಿದೆ. ಆಸ್ಪತ್ರೆ ಧ್ವಂಸ ಮಾಡಿದ್ದರಿಂದ ಘರ್ಷಣೆಗೆ ಕಾರಣವಾಗುವ ಸಾಧ್ಯತೆಯಿದೆ. ಈ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗದಂತೆ ರಾಜಸ್ಥಾನ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಬಿಲ್ವಾರಾ ಪ್ರದೇಶದಲ್ಲಿ 48 ಗಂಟೆಗಳ ಕಾಲ ಇಂಟರ್ನೆಟ್ ಸ್ಥಗಿತಗೊಳಿಸಲಾಗುವುದು ಎಂದು ಘೋಷಿಸಲಾಗಿದೆ.

ಈ ವರ್ಷದ ಮೇ ತಿಂಗಳಲ್ಲಿ ತಪಾಡಿಯಾ ಅವರನ್ನು ಕೆಲವರು ಕೊಲೆ ಮಾಡಿದ್ದರು. ಎರಡು ಕೋಮುಗಳ ನಡುವಿನ ವೈಷಮ್ಯದಿಂದ ಕೊಲೆ ನಡೆದಿದೆ. ಆ ವೇಳೆ ಪರಿಸ್ಥಿತಿ ಆತಂಕಕಾರಿಯಾಗಿತ್ತು. ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಬಿಲ್ವಾರ ವ್ಯಾಪ್ತಿಯ ಎಲ್ಲಾ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!