ಬ್ಯೂಟಿ ಪಾರ್ಲರ್‌ಗೆ ಹೋಗ್ಬೇಡ ಅಂದಿದಕ್ಕೆ ಮಹಿಳೆ ಆತ್ಮಹತ್ಯೆ !

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೆಲವು ಸಾವಿನ ಸುದ್ದಿಗಳು ಕ್ಷುಲ್ಲಕ ಎನಿಸಿಬಿಡುತ್ತವೆ. ಆದರೆ ಇತ್ತೀಚಿನ ದಿನಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಬ್ಯೂಟಿ ಪಾರ್ಲರ್‌ ಗೆ ಹೋಗ್ಬೇಡ ಎಂದು ಪತಿ ತಡೆದಿದ್ದಕ್ಕೆ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ.

34 ವರ್ಷದ ಮಹಿಳೆಯೊಬ್ಬರು ಗಂಡ ಬ್ಯೂಟಿ ಪಾರ್ಲರ್‌ ಗೆ ಹೋಗಬೇಡ ಎಂದು ತಡೆದಿದ್ದಕ್ಕೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರುವಾರದಂದು ಈ ಘಟನೆ ನಡೆದಿದೆ ಎಂದು ಸಬ್‌ ಇನ್‌ಸ್ಪೆಕ್ಟರ್‌ ಉಮಾಶಂಕರ್‌ ಯಾದವ್‌ ಹೇಳಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಎಲ್ಲ ಆಯಾಮಗಳಿಂದ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!