ಅಪರೂಪದ ಆಮೆಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಯಾವುದೇ ಕಷ್ಟವಿಲ್ಲದೆ ಸುಲಭವಾಗಿ ಹಣ ಗಳಿಸುವ ಅಭ್ಯಾಸವಿರುವ ಜನರು ವಿವಿಧ ಮಾರ್ಗಗಳನ್ನು ಆರಿಸಿಕೊಳ್ಳುತ್ತಿದ್ದಾರೆ. ಚಿನ್ನ, ಡ್ರಗ್ಸ್ ಅಲ್ಲದೆ ಅಪರೂಪದ ಜಾತಿಯ ಪ್ರಾಣಿಗಳು ಕಳ್ಳಸಾಗಣೆಯಾಗುತ್ತಿವೆ. ಮಹಾರಾಷ್ಟ್ರದ ಮುಂಬೈನ ಬೊರಿವಲಿ ಲಿಂಕ್ ರಸ್ತೆ ಬಳಿ ಅಕ್ರಮವಾಗಿ ಅಪರೂಪದ ಆಮೆಗಳನ್ನು ಸಾಗಿಸುತ್ತಿದ್ದ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ.

ಮುಂಬೈ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆತನಿಂದ 20 ಅಪರೂಪದ ನಕ್ಷತ್ರ ಆಮೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವುಗಳ ಮೌಲ್ಯ ಸುಮಾರು ರೂ.3.5 ಲಕ್ಷ ಎಂದು ಅಂದಾಜಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!