ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಸಕರ ಅಭಿನಂದನಾ ಸಮಾರಂಭದಲ್ಲೇ ಚಾಕು ಇರಿದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆದಿದೆ.
ತರೀಕೆರೆ ಶಾಸಕ ಶ್ರೀನಿವಾಸ್ ಅವರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಆರ್ಕೇಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ವರುಣ್ (28) ಎಂಬುವವರಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಮಂಜು ಹಾಗೂ ಸಂಜು ಎಂಬುವವರಿಗೆ ಗಾಯಗಳಾಗಿದ್ದು, ಅವರನ್ನು ಕೂಡ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.