ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹತ್ಯೆ ಮಾಡಲು ಯತ್ನಿಸಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ವೆಸ್ಟ್ಪಾಮ್ ಬೀಚ್ನ ಇಂಟರ್ನ್ಯಾಷನಲ್ ಗಾಲ್ಫ್ ಕ್ಲಬ್ನಲ್ಲಿ ಹತ್ಯೆಗೆ ಯತ್ನ ನಡೆದಿತ್ತು.
ಯುಎಸ್ ಜಿಲ್ಲಾ ನ್ಯಾಯಾಧೀಶರಾದ ಐಲೀನ್ ಕ್ಯಾನನ್ ಫೋರ್ಟ್ ಪಿಯರ್ಸ್ ನ್ಯಾಯಾಲಯದಲ್ಲಿ ರಯಾನ್ ರೌತ್ಗೆ ಶಿಕ್ಷೆಯನ್ನು ಪ್ರಕಟಿಸಿದರು. ಸೆಪ್ಟೆಂಬರ್ನಲ್ಲಿ ನ್ಯಾಯಾಧೀಶರು ಎಲ್ಲಾ ಆರೋಪಗಳಲ್ಲಿ ತಪ್ಪಿತಸ್ಥರೆಂದು ಘೋಷಿಸಿದ ಸ್ವಲ್ಪ ಸಮಯದ ನಂತರ ರೌತ್ ತನ್ನನ್ನು ತಾನೇ ಇರಿದುಕೊಳ್ಳಲು ಪ್ರಯತ್ನಿಸಿದ್ದ.



