Wednesday, September 24, 2025

ಪಹಲ್ಗಾಮ್ ದಾಳಿ ವೇಳೆ ಭಯೋತ್ಪಾದಕರಿಗೆ ಸಹಾಯ ಮಾಡಿದ್ದ ವ್ಯಕ್ತಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಪ್ರಿಲ್ 22 ರ ಪಹಲ್ಗಾಮ್ ದಾಳಿ ವೇಳೆ ಭಯೋತ್ಪಾದಕರಿಗೆ ಸಹಾಯ ಮಾಡಿದ್ದ ವ್ಯಕ್ತಿಯನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.

ಬೈಸರನ್ ಕಣಿವೆಯಲ್ಲಿ 26 ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಹತ್ಯೆ ಮಾಡಿದ್ದರು. ಭದ್ರತಾ ಪಡೆಗಳು ಆಪರೇಷನ್ ಮಹಾದೇವ್ ಸಮಯದಲ್ಲಿ ಪಹಲ್ಗಾಮ್‌ ದಾಳಿಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿ, ಶಸ್ತ್ರಾಸ್ತ್ರಗಳು ಮತ್ತು ಸಲಕರಣೆಗಳನ್ನು ವಶಪಡಿಸಿಕೊಂಡಿದ್ದರು. ಅವುಗಳನ್ನು ವಿಧಿವಿಜ್ಞಾನ ವಿಶ್ಲೇಷಣೆಯ ನಂತರ ಮೊಹಮ್ಮದ್ ಕಟಾರಿಯಾ ಎಂಬಾತನನ್ನು ಬಂಧಿಸಲಾಗಿದೆ.

ಕಟಾರಿಯಾನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ