ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುಣೆಯ ಜನನಿಬಿಡಿ ಬಸ್‌ಸ್ಟಾಂಡ್‌ನಲ್ಲಿ ನಿಂತಿದ್ದ ಬಸ್‌ನಲ್ಲಿಯೇ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ.
ಅಕ್ಕಾ ಎಂದು ಕರೆದು ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪಿ ದತ್ತಾತ್ರೇಯ ರಾಮದಾಸ್ ಹುಡುಕಲು ಪೊಲೀಸರು 13 ತಂಡಗಳನ್ನು ರಚಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಆತನ ಬಗ್ಗೆ ಸುಳಿವು ನೀಡಿದವರಿಗೆ 1 ಲಕ್ಷ ರೂ. ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ. ಆತ ವೇಷ ಬದಲಾಯಿಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಆತ ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿದ್ದು, ಯಾವುದೋ ಪ್ರಕರಣದಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ.
ಮಹಿಳೆ ಪುಣೆಯ ಜನನಿಬಿಡ ಸ್ವರ್ಗೇಟ್ ಬಳಿ ಬಸ್‌ಗಾಗಿ ಕಾಯುತ್ತಿದ್ದಳು, ಪೊಲೀಸ್ ಠಾಣೆಯಿಂದ ಸುಮಾರು 100 ಮೀಟರ್ ದೂರದಲ್ಲಿ ನಿಲ್ಲಿಸಿದ್ದ ಬಸ್ಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿದ್ದ. ಮಂಗಳವಾರ ಬೆಳಗ್ಗೆ 5.30 ಕ್ಕೆ ಆಕೆ ತನ್ನ ಮನೆಗೆ ಹೋಗಲು ಬಸ್‌ಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ.
ಬಸ್ ಇಲ್ಲಿ ಬರುವುದಿಲ್ಲ ಬೇರೆ ಕಡೆ ನಿಲ್ಲಿಸಲಾಗಿದೆ ಎಂದು ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ನಾವು ಆರೋಪಿಯನ್ನು ಗುರುತಿಸಿದ್ದೇವೆ ಮತ್ತು ಅವನನ್ನು ಬಂಧಿಸಲು ನಾವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಮಹಿಳೆಯ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.