ಹೊಸದಿಗಂತ ವರದಿ, ಮಂಗಳೂರು:
ಮಂಗಳೂರು ನಗರದಲ್ಲಿ ಮತ್ತೆ ಕೊರೋನಾ ಪ್ರಕರಣಗಳ ಹೆಚ್ಚುತ್ತಿರುವುದು ಜನತೆಯ ಆತಂಕಕ್ಕೆ ಕಾರಣವಾಗಿದೆ.
ಸೋಮವಾರ ಇಲ್ಲಿನ ಖಾಸಗಿ ವಿದ್ಯಾಸಂಸ್ಥೆಯೊಂದರ 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿದ್ದುಕೊಂಡು ಕಾಲೇಜಿಗೆ ಬರುತ್ತಿದ್ದರು ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಅವರಿದ್ದ ಹಾಸ್ಟೆಲ್ ಮೇಲೆ ತೀವ್ರ ನಿಗಾವಹಿಸಲಾಗಿದೆ.
ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವುದನ್ನು ಡಿಎಚ್ಒ ಡಾ.ರಾಮಚಂದ್ರ ಬಾಯಿರಿ ಸ್ಪಷ್ಟಪಡಿಸಿದ್ದಾರೆ.