ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲನ್ ಡೆಸ್ಕ್:
ಕೋವಿಡ್ ನಿರ್ಬಂಧಗಳನ್ನು ಸಡಿಲಿಸಿದ ನಂತರ, ಮೈಮರೆತು ಜನರು ಪ್ರವಾಸಿತಾಣ ಮನಾಲಿಯಲ್ಲಿ ಸಾಗರೋಪಾದಿಯಲ್ಲಿ ಸೇರುತ್ತಿದ್ದಾರೆ.
ಪ್ರವಾಸಿಗರ ದಟ್ಟಣೆಯನ್ನು ನಿಯಂತ್ರಿಸಲು ಹಾಗೂ ಕೋವಿಡ್ ಜಾಗೃತಿ ಮೂಡಿಸಲು ಮಾಸ್ಕ್ ಧರಿಸದ ಪ್ರವಾಸಿಗರಿಗೆ 5,000 ರೂ. ದಂಡ ಹಾಗೂ 8 ದಿನಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅಲ್ಲಿನ ಸರ್ಕಾರ ಮುಂದಾಗಿದೆ.
ಉತ್ತರಾಖಂಡದ ಮುಸ್ಸೂರಿ ಕೆಂಪ್ಟಿ ಫಾಲ್ಸ್ (ಜಲಪಾತ) ನಲ್ಲಿ ಈಗ ಕೇವಲ 50 ಪ್ರವಾಸಿಗರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅರ್ಧ ಗಂಟೆಗೂ ಹೆಚ್ಚು ಹೊತ್ತು ಸ್ಥಳದಲ್ಲಿ ಇರುವಂತಿಲ್ಲ. ಪ್ರವಾಸಿಗರನ್ನು ಮೇಲ್ವಿಚಾರಣೆ ಮಾಡಲು ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ.
ಮನಾಲಿಯಲ್ಲಿ ಕೋವಿಡ್ -19 ಪರಿಸ್ಥಿತಿ ಸುಧಾರಿಸಲು ಪ್ರಾರಂಭಿಸುತ್ತಿದ್ದಂತೆ ಶಿಮ್ಲಾ, ಮನಾಲಿ, ಧರ್ಮಶಾಲಾ, ಡಾಲ್ಹೌಸಿ, ನರ್ಕಂದ ಮತ್ತು ರಾಜ್ಯದ ಇತರ ಭಾಗಗಳಿಗೆ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಪ್ರತಿ ದಿನ 6 ರಿಂದ 7 ಲಕ್ಷ ಜನ ಪ್ರವಾಸಿಗರು ಬರುತ್ತಿದ್ದಾರೆ ಎಂದು ಎಎನ್ಐ ವರದಿ ತಿಳಿಸಿದೆ.