June 30, 2026
Tuesday, June 30, 2026
spot_img

ಚೊಚ್ಚಲ ಪಂದ್ಯದಲ್ಲಿ ಮಾನವ್ ಬೊಂಬಾಟ್ ಬೌಲಿಂಗ್: ದಿನದಾಟದಂತ್ಯಕ್ಕೆ ಆಫ್ಘಾನಿಸ್ತಾನ 113/5

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಫ್ಘಾನಿಸ್ತಾನ ವಿರುದ್ದದ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ಮೇಲುಗೈ ಸಾಧಿಸಿದ್ದು, ಆಫ್ಘಾನಿಸ್ತಾನ ದಿನದಾಟದಂತ್ಯಕ್ಕೆ ಐದು ವಿಕೆಟ್ ಕಳೆದುಕೊಂಡು 113 ರನ್ ಗಳಿಸಿ ಸಂಕಷ್ಟಕ್ಕೆ ಸಿಲುಕಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 8 ವಿಕೆಟ್ ನಷ್ಟಕ್ಕೆ 564 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಬಳಿಕ ಇನ್ನಿಂಗ್ಸ್ ಆರಂಭಿಸಿದ ಅಫ್ಘಾನಿಸ್ತಾನ ತಂಡದ ಬ್ಯಾಟ್ಸ್ ಮ್ಯಾನ್ ಗಳು ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ.

ಮಾನವ್ ಸುತಾರ್ ಭರ್ಜರಿ ಬೌಲಿಂಗ್

ಭಾರತದ ಪರ ಚೊಚ್ಚಲ ಪಂದ್ಯವನ್ನಾಡಿದ ಯುವ ಸಿನ್ನರ್ ಮಾನವ್ ಸುತಾರ್ ಪ್ರಮುಖ 3 ವಿಕೆಟ್‌ಗಳನ್ನು ಪಡೆದರು. ಆರಂಭಿಕರಾದ ಅಬ್ದುಲ್ ಮಲಿಕ್ 16 , ಸೆದಿಕುಲ್ಲಾ ಅಟಲ್ 17 ರನ್ ಗೆ ವಿಕೆಟ್ ಒಪ್ಪಿಸಿದರು. ಅನುಭವಿ ರೆಹಮನುಲ್ಲಾ ಗುರ್ಬಾಜ್ ಕೇವಲ 12 ರನ್ ಗಳಿಸಿ ಔಟಾದರೆ, ನಾಯಕ ಹಷ್ಮತುಲ್ಲಾ ಶಾಹಿದಿ 20 ರನ್ ಗಳಿಸಿ ಪ್ರಸಿದ್ಧ್ ಕೃಷ್ಣಗೆ ವಿಕೆಟ್ ಒಪ್ಪಿಸಿದರು. ಅಫ್ಸರ್ ಝಝಾಯ್ 3 ರನ್ ಗಳಿಸಿ ಮಾನವ ಸುತರ್ ಗೆ ವಿಕೆಟ್ ಒಪ್ಪಿಸಿದರು.

ಒಂದೆಡೆ ವಿಕೆಟ್ ಉರುಳುತ್ತಿದ್ದರೆ, ಮತ್ತೊಂದೆಡೆ ರೆಹಮತ್ ಶಾ ಅಜೇಯ 43 ರನ್ ಗಳಿಸಿ ಮೂರನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !