March 3, 2026
Tuesday, March 3, 2026
spot_img

ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಮಂಡಲ ಪೂಜೆ: ಸರತಿಯಲ್ಲಿ ಲಕ್ಷಾಂತರ ಭಕ್ತರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಮಂಡಲ ಪೂಜೆ ಆರಂಭವಾಗಿದೆ. ಈ ಹಿನ್ನೆಲೆ ಭಕ್ತರ ಸಂಖ್ಯೆಯು ಅಧಿಕವಾಗಿದೆ.

ಭಾನುವಾರ ಸಂಜೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ತೆರೆಯಲಾಗಿದ್ದು, ಮುಂದಿನ 2 ತಿಂಗಳು ಭಕ್ತರಿಗೆ ದರುಶನ ಲಭ್ಯವಾಗಲಿದೆ. ಈ ಬೆನ್ನಲ್ಲೇ ಶಬರಿಮಲೈನಲ್ಲಿ ಅಯ್ಯಪ್ಪನ ದರುಶನ ಕ್ಕೆ ಜನಸಾಗರವೇ ಹರಿದು ಬಂದಿದೆ.

ಒಂದೂವರೆ ದಿನದಲ್ಲಿ ಒಂದೂವರೆ ಲಕ್ಷ ಭಕ್ತರು ಅಯ್ಯಪ್ಪನ ದರುಶನ ಪಡೆದುಕೊಂಡಿದ್ದಾರೆ. ಆದರೆ, ಭಾರೀ ಜನಸ್ತೋಮದಿಂದಾಗಿ ಪಂಪಾದಿಂದ ಶಬರಿಮಲೆಗೆ ತಲುಪಲು 7 ಗಂಟೆಗಳು ಬೇಕಾಗಿದ್ದು ಎಲ್ಲಿ ನೋಡಿದ್ರೂ ಜನಜಂಗುಳಿ ಇದೆ. ಅದರಲ್ಲೂ 18ನೇ ಮೆಟ್ಟಿಲು ಹತ್ತಲು ಭಕ್ತರಲ್ಲಿ ನೂಕು ನುಗ್ಗಲು ಶುರುವಾಗಿದೆ.

ಭಕ್ತರ ನಿಯಂತ್ರಣಕ್ಕೆ ಕೇರಳ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿದೆ. ಕೇಂದ್ರ ತಂಡ ಆಗಮಿಸಲು ಇನ್ನೆರಡು ದಿನ ಬೇಕಾಗಿದ್ದು ಭಕ್ತರನ್ನು ನಿಯಂತ್ರಿಸುವುದೇ ಹರಸಾಹಸವಾಗಿದೆ.

ಇದರ ನಡುವೆ ಕೇರಳದಲ್ಲಿ ಹೊಸ ವೈರಸ್ ಆತಂಕ ಹೆಚ್ಚಿಸಿದೆ. ಮೆದುಳು ತಿನ್ನುವ ಅಮಿಬಾ ಬಗ್ಗೆ ಎಚ್ಚರಿಕೆ ವಹಿಸುವಂತೆ ಅಯ್ಯಪ್ಪ ಭಕ್ತರಿಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !