ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯದ ಕೆರಗೋಡು ಗ್ರಾಮದ ನಂತರ ಎಂ.ಕೆ.ಹುಬ್ಬಳ್ಳಿ ಗ್ರಾಮದಲ್ಲೂ ಭಗವಾ ಧ್ವಜಾವನ್ನು ತೆರವು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಮುಖಂಡರು ಹಾಗೂ ಹಿಂದೂಪರ ಕಾರ್ಯಕರ್ತರು ಪಾದಯಾತ್ರೆ ನಡೆಸಿದರು.
ಬೆಳಗಾವಿಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಭಗವಾ ಧ್ವಜವನ್ನು ಪೊಲೀಸರು ತೆಗೆಸಿದ್ದಾರೆ. ಈ ಕ್ರಮವನ್ನು ವಿರೋಧಿಸಿ ಬಿಜೆಪಿ ಮುಖಂಡರು ಹಾಗೂ ಹಿಂದೂಪರ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಗ್ರಾಮದಾದ್ಯಂತ ಧ್ವಜ ಕಟ್ಟುವ ಕಾರ್ಯಕ್ರಮವೂ ನಡೆಯಲಿದ್ದು. ನಂತರ, ನಗರದ ಪ್ರಮುಖ ಹನುಮಾನ್ ದೇವಾಲಯದ ಮೈದಾನದಲ್ಲಿ ಹಿಂದೂ ಕಾರ್ಯಕರ್ತರು ಭಗವಾ ಧ್ವಜಾರೋಹಣವನ್ನು ಮಾಡಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.