Tuesday, August 9, 2022

Latest Posts

ಮಂಡ್ಯ ನಗರ ಸಭಾಧ್ಯಕ್ಷರಿಂದ ಇಂದಿರಾ ಕ್ಯಾಂಟೀನ್‌ಗೆ ಭೇಟಿ: ಪರಿಶೀಲನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಮಂಡ್ಯ:

ಕೂಲಿ ಕಾರ್ಮಿಕರು, ಬಡವರು, ನಿರ್ಗತಿಕರಿಗೆ ತೊಂದರೆಯಾಗುತ್ತಿರುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಇಂದಿರಾ ಕ್ಯಾಂಟೀನ್ ಮೂಲಕ ಉಚಿತವಾಗಿ ಮೂರು ಹೊತ್ತು ಊಟ ನೀಡುತ್ತಿದೆ ಎಂದು ನಗರಸಭಾಧ್ಯಕ್ಷ ಎಚ್.ಎಸ್. ಮಂಜು ತಿಳಿಸಿದರು.
ನಗರದ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್-19 2ನೇ ಅಲೆಯಿಂದಾಗಿ ಕೂಲಿ ಕಾರ್ಮಿಕರು, ಬಡವರು, ನಿರ್ಗತಿಕರು ಹಸಿದ ಹೊಟ್ಟೆಯಲ್ಲೇ ಇರಬೇಕಾಗಿದೆ. ಅವರಿಗೆ ಕೆಲಸ ಮಾಡಲು ಕೆಲಸ ಇಲ್ಲ. ಸಂಕಷ್ಟ ಅನುಭವಿಸುತ್ತಿದ್ದಾರೆ. ಇವರ ಸಂಕಷ್ಟವನ್ನು ಮನಗಂಡ ಸರ್ಕಾರ ಉಚಿತವಾಗಿ ಮೂರು ಹೊತ್ತು ಊಟ ನೀಡಲು ನಿರ್ಧರಿಸಿ ಇಂದಿರಾ ಕ್ಯಾಂಟೀನ್ ಮೂಲಕ ಅವರ ಹೊಟ್ಟೆ ತುಂಬಿಸುವ ಪ್ರಯತ್ನ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಇಂದಿರಾ ಕ್ಯಾಂಟೀನ್‌ನಲ್ಲಿ ಸಣ್ಣ ಪುಟ್ಟ ಲೋಪದೋಷಗಳ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದವು. ಈ ಹಿನ್ನಲೆಯಲ್ಲಿ ನಾವು ಮತ್ತು ನಮ್ಮ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದ ಮಾರ್ಗಸೂಚಿಯಂತೆ ಊಟ ನೀಡಬೇಕು ಎಂದು ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ಊಟವನ್ನು ಪಡೆದವರು ಯಾವುದೇ ಕಾರಣಕ್ಕೂ ಅದನ್ನು ಬಿಸಾಡದೆ, ಹಿತ-ಮಿತವಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಅನ್ನ ಪರಬ್ರಹ್ಮ ಸ್ವರೂಪವಾದದ್ದು. ಅದನ್ನು ಯಾವುದೇ ಕಾರಣಕ್ಕೂ ವೇಸ್ ಮಾಡದೆ ಉಪಯೋಗಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಪೌರಾಯುಕ್ತ ವಿ. ಲೋಕೇಶ್, ಪರಿಸರ ಅಭಿಯಂತರೆ ಮೀನಾಕ್ಷಿ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss