ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಮಂಡ್ಯ :
ಜಿಲ್ಲಾಧಿಕಾರಿ ಕಾರು ಚಾಲಕನಿಗೆ ಸೋಂಕು ದೃಢಪಟ್ಟ ಬೆನ್ನಹಿಂದೆಯೇ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ.
ಕಾರು ಚಾಲಕನಿಗೆ ಗುರುವಾರ ಪಾಸಿಟೀವ್ ಬಂದ ಹಿನ್ನೆಲೆಯಲ್ಲಿ ಎಸ್.ಅಶ್ವತಿ ಶುಕ್ರವಾರದಿಂದ ಹೋಂ ಐಸೋಲೇಷನ್ ಆಗಿದ್ದರು. ಅನುಮಾನದ ಮೇಲೆ ಕೋವಿಡ್ ಪರೀಕ್ಷೆಗೊಳಗಾದಾಗ ವರದಿಯಲ್ಲಿ ಪಾಸಿಟೀವ್ ದೃಢಪಟ್ಟಿತ್ತು.
ಕೋವಿಡ್ ನಿರ್ವಹಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಸದ್ಯ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.