ಮಂಡ್ಯ, ಹಾಸನ ಟಿಕೆಟ್​​​ ಬೇಡಿಕೆ ವಿಚಾರ: ನಿಖಿಲ್ ಅಭ್ಯರ್ಥಿ ಆಗುವಂತೆ ಒತ್ತಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯ ಮತ್ತು ಹಾಸನ ಟಿಕೆಟ್​​​ಗೆ ಬಿಜೆಪಿ ನಾಯಕರ ಬೇಡಿಕೆ ಕುರಿತು ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಕಳೆದ ಸಾರ್ವತ್ರಿಕ ಚುನಾವಣೆಯ ಮತಗಳಿಕೆಯನ್ನು ಗಮನಿಸಿದರೆ ಬಿಜೆಪಿಗಿಂತ ಜೆಡಿಎಸ್ ಮೂರು ಪಟ್ಟು ಹೆಚ್ಚು ಮತಗಳನ್ನು ಪಡೆದಿದೆ.

ಕೋಲಾರ, ಮಂಡ್ಯ, ಹಾಸನದಲ್ಲಿ ಜೆಡಿಎಸ್ ಹೆಚ್ಚು ಮತ ಪಡೆದಿದೆ. ಮುಂದಿನ ದಿನಗಳಲ್ಲಿ ಸೀಟು ಹಂಚಿಕೆ ವಿಚಾರವಾಗಿ ಚರ್ಚೆ ನಡೆಸಲಾಗುವುದು, ಕಾರ್ಯಕರ್ತರಲ್ಲಿ ಗೊಂದಲ ಬೇಡ, ಸಣ್ಣಪುಟ್ಟ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಸುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಭರವಸೆ ನೀಡಿದರು.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಆಗುವಂತೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!