ಹೊಸದಿಗಂತ ವರದಿ,ಮಂಡ್ಯ :
ಭಾರತೀಯ ಜನತಾ ಪಾರ್ಟಿ ಮತ್ತು ಜೆಡಿಎಸ್ ವತಿಯಿಂದ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಇಂದು ಸಂಜೆ ಮಂಡ್ಯ ನಗರದ ಹೊರ ವಲಯಕ್ಕೆ ಪ್ರವೇಶಿಸಿತ್ತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ವಿಜಯೇಂದ್ರ ನೇತೃತ್ವದಲ್ಲಿ ಸಹಸ್ರಾರು ಮಂದಿ ಬಿಜೆಪಿ ಮತ್ತು ಜೆಡಿಎಸ್‌ನ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಮದ್ದೂರಿನಿಂದ ಮಂಡ್ಯದ ಹೊರ ವಲಯದಲ್ಲಿರುವ ಶಶಿಕಿರಣ ಕನ್ವೆನ್ಷ್‌ನ್ ಹಾಲ್‌ನಲ್ಲಿ ಇಂದು ರಾತ್ರಿ ವಾಸ್ತವ್ಯ ಹೂಡಲಿದೆ.
ಸುಮಾರು 20ಕಿ.ಮೀ. ಪಾದಯಾತ್ರೆಯಲ್ಲಿ ಆಗಮಿಸಿದ ಕಾರ್ಯಕರ್ತರು ರಾತ್ರಿ ಶಶಿಕಿರಣ ಕನ್ವೆನ್ಷ್‌ನ್ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರಿಗೂ ಭೋಜನ ಹಾಗೂ ಆರೋಗ್ಯ ಸಮಸ್ಯೆ ಇದ್ದಲ್ಲಿ ಸ್ಥಳದಲ್ಲೇ ವೈದ್ಯರು ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡುತ್ತಿದ್ದುದು ಕಂಡುಬಂತು.
ನಾಳೆ ಬೆಳಗ್ಗೆ 8 ಗಂಟೆಗೆ ಪಾದಯಾತ್ರೆ ಆರಂಭವಾಗಲಿದ್ದು, ಮಂಡ್ಯ ನಗರದಲ್ಲಿ ಬಿಜೆಪಿ ಮುಖಂಡರು ಬಹಿರಂಗ ಸಭೆ ನಡೆಸಲಿದ್ದಾರೆ.