ಮಂಡ್ಯ ಲೋಕ ಚುನಾವಣಾ ಕಣ: ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಹೆಚ್.ಡಿ. ರೇವಣ್ಣ ಸ್ಪರ್ಧೆ!!!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಸ್ಪರ್ಧೆಗೆ ಹೆಚ್.ಡಿ. ರೇವಣ್ಣ ಕಣಕ್ಕಿಳಿದಿದ್ದು, ನಾಮಪತ್ರ ಸಲ್ಲಿಸಿದ್ದಾರೆ!

ಹೌದು, ಸರಿಯಾಗಿಯೇ ಓದಿದ್ದೀರಿ. ಆದರೆ ಈ ಹೆಚ್.ಡಿ. ರೇವಣ್ಣ, ಹೆಚ್.ಡಿ. ಕುಮಾರಸ್ವಾಮಿ ಅವರ ಸಹೋದರ ಅಲ್ಲ. ಇವರು ಪೂರ್ವಾಂಚಲ ಮಹಾಪಂಚಾಯತ್ ಪಕ್ಷದ ಅಭ್ಯರ್ಥಿಯಾಗಿದ್ದಾರೆ.

ಚನ್ನರಾಯಪಟ್ಟಣದ ಕೋಡಿಹಳ್ಳಿ ಗ್ರಾಮದ ದೊಡ್ಡೇಗೌಡರ ಪುತ್ರರಾಗಿರುವ ಹೆಚ್.ಡಿ. ರೇವಣ್ಣ ಈ ಬಾರಿ ಸ್ಪರ್ಧಾಕಾಂಕ್ಷಿಯಾಗಿ ಕಣಕ್ಕಿಳಿದಿದ್ದಾರೆ.

ಇಲ್ಲಿ ಈಗಾಗಲೇ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕಾಂಗ್ರೆಸ್ ಸ್ಟಾರ್ ಚಂದ್ರು ಅವರನ್ನು ಕಣಕ್ಕಿಳಿಸಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!