Sunday, October 1, 2023

Latest Posts

ಜಲಶಕ್ತಿ ಸಚಿವರನ್ನು ಭೇಟಿಯಾದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾವೇರಿ ನೀರಿನ ಕುರಿತು ಮಂಡ್ಯದಲ್ಲಿ ನಿರಂತರ ಪ್ರತಿಭಟನೆ ನಡೆಯುತ್ತಿದ್ದು, ಈ ಹಿನ್ನೆಲೆ ಇಂದು ದೆಹಲಿಯಲ್ಲಿ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶಿಕಾವತ್ ಅವರನ್ನು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಭೇಟಿ ಮಾಡಿ ಚರ್ಚಿಸಿದ್ದಾರೆ.

ಕರ್ನಾಟಕದ ರೈತರು ಬರ ಕಾರಣದಿಂದಾಗಿ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಮಂಡ್ಯ ರೈತರ ಜೀವನಾಡಿ ಆಗಿರುವ ಕಾವೇರಿಯಿಂದ ನಿರಂತರವಾಗಿ ತಮಿಳು ನಾಡಿಗೆ ನೀರು ಬಿಡಲಾಗುತ್ತಿದೆ. ಮಂಡ್ಯ ಭಾಗದ ರೈತರ ಪರಿಸ್ಥಿತಿ ಚಿಂತಾಜನಕವಾಗಿರುವಾಗ ಮತ್ತೆ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೇಳಿದ್ದು ನಿಜಕ್ಕೂ ಆಘಾತಕಾರಿ ಬೆಳವಣಿಗೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ರೈತರ ಗದ್ದೆಗಳಿಗೆ ಮಾತ್ರವಲ್ಲ, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಲಿದೆ. ಈ ಎಲ್ಲ ಸಂಗತಿಗಳನ್ನು ದೆಹಲಿಯಲ್ಲಿ ಇಂದು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶಿಕಾವತ್ ಅವರನ್ನು ಭೇಟಿ ಮಾಡಿ ವಿವರಿಸಿದ್ದೇನೆ. ಆಯಾ ರಾಜ್ಯಗಳ ಜಂಟಿ ಸಮಿತಿಯನ್ನು ರಚಿಸುವುದಾಗಿ ಮತ್ತು ಮುಂದಿನ ವಾರದಲ್ಲೇ ಸಮೀಕ್ಷೆ ನಡೆಸುವುದಾಗಿ, ನಮ್ಮ ರೈತರ ಪರವಾಗಿ ನಿಂತುಕೊಂಡು ಕುಡಿಯುವ ನೀರಿನ ಸಮಸ್ಯೆಯನ್ನೂ ಬಗೆಹರಿಸುವುದಾಗಿ ಅವರು ಭರವಸೆ ಕೊಟ್ಟಿದ್ದಾರೆ. ಆದಷ್ಟು ಬೇಗ ಭರವಸೆ ಈಡೇರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!