ಮಂಡ್ಯ ಮುಡಾ 5 ಕೋಟಿ ವಂಚನೆ ಪ್ರಕರಣ: ಕಾಂಗ್ರೆಸ್ ಮುಖಂಡ ಕೆಬ್ಬಳ್ಳಿ ಆನಂದ್ ಸೇರಿ ಐದು ಮಂದಿಗೆ 7 ವರ್ಷ ಸಜೆ

ಹೊಸದಿಗಂತ ವರದಿ,ಮಂಡ್ಯ:

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ 5 ಕೋಟಿ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಕೆಬ್ಬಳ್ಳಿ ಆನಂದ್ ಸೇರಿದಂತೆ ಐದು ಮಂದಿಗೆ ತಲಾ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಪಿಐ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಕೆಬ್ಬಹಳ್ಳಿ ಆನಂದ್, ನಾಗಲಿಂಗಸ್ವಾಮಿ, ಹೆಮ್ಮನಹಳ್ಳಿ ಚಂದ್ರಶೇಖರ್, ಮುಡಾದ ಪ್ರಥಮ ದರ್ಜೆ ಸಹಾಯಕ ಎಚ್.ಕೆ. ನಾಗರಾಜು, ಕೆ.ಬಿ. ಹರ್ಷ ಎಂಬುವರೇ ಶಿಕ್ಷೆಗೊಳಗಾದ ಆಪಾದಿತರು.
ಏನಿದು ಪ್ರಕರಣ :
ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ 5 ಕೋಟಿ ಹಣವನ್ನು ಅಲಹಾಬಾದ್ ಬ್ಯಾಂಕಿನಲ್ಲಿ ಠೇವಣಿ ಇಡಲಾಗಿತ್ತು. ಬ್ಯಾಂಕಿನಲ್ಲಿ ಇಡಲಾಗಿದ್ದ ಠೇವಣಿ ಹಣವನ್ನು ಕಾನೂನು ಬಾಹಿರವಾಗಿ ಕಬಳಿಸಿ ವಂಚಿಸಿದ್ದ ಆರೋಪದ ಮೇರೆಗೆ ಕಾಂಗ್ರೆಸ್ ಮುಖಂಡ ಕೆಬ್ಬಹಳ್ಳಿ ಆನಂದ್ ಸೇರಿ ಒಟ್ಟು 11 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 2013ರ ಜುಲೈ 5ರಂದು ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಎ್ಐಆರ್ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಿತ್ತು.
ಸಿಬಿಐ ವಿಚಾರಣೆ ವೇಳೆ 6 ಜನರನ್ನು ಕೈಬಿಟ್ಟು 5 ಮಂದಿಯ ವಿರುದ್ಧ ಅಂದಿನ ಸಿಬಿಐ ಡಿವೈಎಸ್ಪಿ ಕೆ.ವೈಘಿ. ಗುರುಪ್ರಸಾದ್ ನೇತೃತ್ವದ ತಂಡ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು.
ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪಿಗಳ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ಐದು ಮಂದಿ ಅಪರಾಧಿಗಳಿಗೆ ತಲಾ 7 ವರ್ಷ ಜೈಲು ಶಿಕ್ಷೆಘಿ, ತಲಾ ಒಂದೊಂದು ಕೋಟಿಯಂತೆ ಐದು ಕೋಟಿ ದಂಡ ವಿಧಿಸಿ ತೀರ್ಪು ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!