ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದ ಸುಮಲತಾ ಅಂಬರೀಶ್ ಇದೀಗ ಅಧಿಕೃತವಾಗಿ ಬಿಜೆಪಿ ಪಾಳಯಕ್ಕೆ ಸೇರ್ಪಡೆಯಾಗಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಸುಮಲತಾ ಅಂಬರೀಶ್ ಮತ್ತು ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರನ್ನು ಹೊರತುಪಡಿಸಿ ಹಲವು ಪ್ರಮುಖ ನಾಯಕರು ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಭಾರತದ ಮಾಜಿ ಕ್ರಿಕೆಟಿಗ ಮತ್ತು ಬಿಗ್ ಬಾಸ್ ಸೀಸನ್ 4 ರ ಸ್ಪರ್ಧಿ ದೊಡ್ಡ ಗಣೇಶ್ ಕೂಡ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಸಮ್ಮುಖದಲ್ಲಿ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷಕ್ಕೆ ಸೇರಿದ್ದಾರೆ .