‘Mandya to India’ ಸಕ್ಕರೆ ನಾಡಿನಲ್ಲಿ ಬೃಹತ್‌ ಉದ್ಯೋಗ ಮೇಳ: 150ಕ್ಕೂ ಹೆಚ್ಚು ಕಂಪನಿ ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ  ಅವರ ನೇತೃತ್ವದಲ್ಲಿ ಸಕ್ಕರೆ ನಾಡು ಮಂಡ್ಯ ನಗರದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದ್ದು, ಸುಮಾರು 150ಕ್ಕೂ ಹೆಚ್ಚು ಉದ್ಯೋಗದಾತ ಕಂಪನಿಗಳು ಭಾಗಿಯಾಗಿವೆ.

ಮಂಡ್ಯ ನಗರದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಇಂದು (ಅ.18) ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ನಾಳೆಯೂ (ಅ.19) ಇದೇ ಸಮಯದಲ್ಲಿ ಉದ್ಯೋಗ ಮೇಳ ಜರುಗಲಿದೆ. ಆಸಕ್ತ ಯುವಜನರು ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ.

ಉದ್ಯೋಗ ಮೇಳದಲ್ಲಿ ದೇಶದ ಉದ್ದಗಲಕ್ಕೂ ಇರುವ 150ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳಕ್ಕೆ ಭಾಗಿಯಾಗಿವೆ. ಮಂಡ್ಯ ಭಾಗದ 3,000ಕ್ಕೂ ಹೆಚ್ಚು ನಿರುದ್ಯೋಗಿ ಯುವ ಜನರಿಗೆ ಉದ್ಯೋಗ ಕೊಡಿಸುವ ಗುರಿಯನ್ನು ಈ ಮೂಲಕ ಹಾಕಿಕೊಳ್ಳಲಾಗಿದೆ.

ಮಂಡ್ಯ ಟು ಇಂಡಿಯಾʼ ಎನ್ನುವ ಘೋಷವಾಕ್ಯದೊಂದಿಗೆ ಉದ್ಯೋಗ ಮೇಳ ನಡೆಯುತ್ತಿದ್ದು, ಮಂಡ್ಯದ ಇತಿಹಾಸದಲ್ಲಿಯೇ ಇದೊಂದು ಮೈಲುಗಲ್ಲು ಆಗಲಿದೆ. ರೈತಾಪಿ ಜನರ ಮಕ್ಕಳಿಗೆ ಉದ್ಯೋಗ ಕಲ್ಪಿಸಬೇಕು ಎನ್ನುವುದು ಆಗಿದ್ದು, ಈ ಮೂಲಕ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!