Monday, January 26, 2026
Monday, January 26, 2026
spot_img

ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಕ್ಕು ಮೃತಪಟ್ಟ ಯುವಕ

ಹೊಸದಿಗಂತ ವರದಿ ಮಂಡ್ಯ :

ನೀರಿನಲ್ಲಿ ಈಜಲು ಹೋದ ಯುವಕನೋರ್ವ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿರುವ ಘಟನೆ ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿಯ ಕಾವೇರಿ ನದಿಯಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೆಗ್ಗಡೆಹಳ್ಳಿ ಗ್ರಾಮದ ನಿವಾಸಿ ದೀಪಕ್ ಅವರ ಪುತ್ರ ಎಚ್.ಡಿ.ತೇಜಸ್ (22) ಮೃತ ಯುವಕ.

ಬೆಂಗಳೂರಿನ ಹೆಗ್ಗನಹಳ್ಳಿಕ್ರಾಸ್‌ನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈತ ಭಾನುವಾರ ತನ್ನ ಹನ್ನೊಂದು ಮಂದಿ ಸ್ನೇಹಿತರೊಂದಿಗೆ ಟೆಂಪೊ ಟ್ರಾವಲರ್‌ನಲ್ಲಿ ಮುತ್ತತ್ತಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪ್ರವಾಸ ಬಂದಿದ್ದನು. ಕಾವೇರಿ ನದಿಯಲ್ಲಿ ಈಜಾಡಲು ಹೋದಾಗ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾನೆ.

ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ನುರಿತ ಸ್ಥಳೀಯ ಈಜುಗಾರರ ಸಹಾಯದಿಂದ ಯುವಕನ ಮೃತದೇಹವನ್ನು ಸೋಮವಾರ ಬೆಳಿಗ್ಗೆ ನದಿಯಿಂದ ಹೊರತೆಗೆಯಲಾಯಿತು. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read