Tuesday, August 16, 2022

Latest Posts

ಮಂಗಳೂರು ಏರ್ ಪೋರ್ಟ್ ನಲ್ಲಿ 13.88 ಲಕ್ಷ ರೂ. ಮೌಲ್ಯದ ಚಿನ್ನ ವಶ

ಹೊಸ ದಿಗಂತ ವರದಿ ಮಂಗಳೂರು:

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೊಂದು ಅಕ್ರಮ ಚಿನ್ನ ಸಾಗಾಟ ಪ್ರಕರಣ ಪತ್ತೆಯಾಗಿದೆ ಸೆ.13 ರ ಬಳಿಕ ಸತತವಾಗಿ ಪತ್ತೆಯಾದ ನಾಲ್ಕನೇ ಪ್ರಕರಣ ಇದಾಗಿದೆ.
ಮಂಗಳವಾರ ವಿಮಾನದ ಮೂಲಕ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಪ್ರಯಾಣಿಕೋರ್ವನನ್ನು ವಶಕ್ಕೆಪಡೆದುಕೊಂಡ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಆರೋಪಿಯಿಂದ ರೂ.13,88,823 ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ದುಬೈಯಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕಾಸರಗೋಡಿನ ಪ್ರಯಾಣಿಕನಲ್ಲಿ ಬೃಹತ್ ಮೊತ್ತದ ಚಿನ್ನ ಪತ್ತೆಯಾಗಿದೆ. ಈತ ಎರಡು ಲೇಯರ್ ಇರುವ ಬಟ್ಟೆಗಳ ನಡುವೆ ಚಿನ್ನವನ್ನು ಅಡಗಿಸಿ ಯಾರಿಗೂ ಅನುಮಾನ ಬಾರದಂತೆ ಚಿನ್ನವನ್ನು ಸಾಗಾಟ ಮಾಡುತ್ತಿದ್ದ . ಆದರೆ ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟ ಬಯಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss