ಶಾಂತಿ ಕದಡುವ ಕುರಿತ ಸುದ್ದಿಗಳನ್ನು ಶೇರ್ ಮಾಡಿದರೆ ಕಠಿಣ ಕ್ರಮ: ಮಂಗಳೂರು ಕಮಿಷನರ್ ಎಚ್ಚರಿಕೆ

ಹೊಸದಿಗಂತ ವರದಿ, ಮಂಗಳೂರು:

ಸಾಮಾಜಿಕ ಜಾಲತಾಣದ ಮೂಲಕ ಶಾಂತಿ ಕದಡುವ ಪ್ರಯತ್ನ ಮಾಡಿದರೆ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಎಚ್ಚರಿಸಿದ್ದಾರೆ.
ಯಾರೂ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಕದಡುವ ಭಂಡ ಧೈರ್ಯ ತೋರುವುದು ಬೇಡ. ಶಾಂತಿ ಕದಡುವ ಕುರಿತ ಸುದ್ದಿಗಳನ್ನು ಶೇರ್ ಮಾಡುವುದು, ಲೈಕ್, ಫಾರ್ವರ್ಡ್, ಕಮೆಂಟ್ ಮಾಡಬಾರದು. ಒಂದು ವೇಳೆ ಶಾಂತಿ ಕದಡುವ ಯತ್ನ ನಡೆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದವರು ಎಚ್ಚರಿಕೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳ ಮೇಲೆ ಮಂಗಳೂರು ಪೊಲೀಸರು ಹದ್ದಿನಕಣ್ಣಿಟ್ಟಿದ್ದು, ಪ್ರತಿಯೊಬ್ಬರ ಚಲನವಲನಗಳನ್ನು ಗಮನಿಸುತ್ತಿದ್ದಾರೆ. ಫೇಸ್‌ಬುಕ್, ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಶಾಂತಿ ಕದಡುವ ಭಂಡ ಧೈರ್ಯತೋರಬಾರದು. ಕಳೆದ ಎರಡು ತಿಂಗಳಿನಿಂದ ಮಂಗಳೂರು ಪೊಲೀಸರು ಇಂತಹ ಸಮಾಜಘಾತುಕರ ಮೇಲೆ ನಿಗಾ ವಹಿಸಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!