ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರಿನ ಪರಿಸರದ ನಡೆದ ಆಟೋ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಗಾಯಗೊಂಡಿದ್ದ ಆಟೋ ಪ್ರಯಾಣಿಕನ ಸ್ಥಿತಿ ಗಂಭೀರವಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್ . ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ ಶಂಕಿತ ವ್ಯಕ್ತಿ(ಆಟೋ ಪ್ರಯಾಣಿಕ) ಹಾಗೂ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಆಟೋ ಚಾಲಕ ಪುರುಷೋತ್ತಮ್ ಪ್ರಾಣಾಪಾಯದಿಂದ ಪಾರಾಗಿದ್ದು, ಪ್ರಯಾಣಿಕನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದರು.
ಶಂಕಿತ ವ್ಯಕ್ತಿಗೆ ತ್ರೀವ ಸುಟ್ಟ ಗಾಯವಾದ್ದರಿಂದ ಮಾತಾಡಲು ವೈದ್ಯರು ಯಾರನ್ನೂ ಬಿಡುತ್ತಿಲ್ಲ. ಹೀಗಾಗಿ ವಿಚಾರಣೆ ಸಾಧ್ಯವಾಗಿಲ್ಲ. ಪ್ರಕರಣದ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತೇವೆ ಎಂದು ಹೇಳಿದರು.
ಸದ್ಯ ಆಟೋ ಚಾಲಕನ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿದ್ದೇವೆ.ಶಂಕಿತನಿಗೆ ಬೇರೆ ಲಿಂಕ್ ಇರುವ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ. ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ನಿಗಾ ವಹಿಸಲಾಗಿದ್ದು, ಆತ ಗುಣಮುಖವಾಗುತ್ತಿದ್ದಂತೆ ವಿಚಾರಣೆ ಮಾಡುತ್ತೇವೆ. ಎಲ್ಲಾ ಮಾಹಿತಿ ಹೊರಬರಲಿದೆ ಎಂದು ಸ್ಪಷ್ಟಪಡಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಅನುಮಾನಾಸ್ಪದ ವ್ಯಕ್ತಿ ವಸ್ತು ಪ್ರದೇಶಗಳನ್ನು ನಿಗಾ ವಹಿಸಲಾಗಿದೆ. ಪೊಲೀಸ್ ಸಿಬ್ಬಂದಿ ವ್ಯಕ್ತಿಗಳು ಮತ್ತು ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ನಿಗಾ ವಹಿಸಲಾಗಿದೆ ಎಂದರು.