spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಂಗಳೂರು ದಸರಾ ಮಹೋತ್ಸವಕ್ಕೆ ನೆರವು ನೀಡುವ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ನಿರ್ಧಾರ: ಸಿಎಂ

- Advertisement -Nitte

ಹೊಸ ದಿಗಂತ ವರದಿ, ಮಂಗಳೂರು:

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವಕ್ಕೆ ಸರಕಾರದಿಂದ ನೆರವು ನೀಡುವ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ದಸರಾ ಮಹೋತ್ಸವಕ್ಕೆ ಬುಧವಾರ ಸಂಜೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.
ಕುದ್ರೋಳಿಯ ದಸರಾ ಮಹೋತ್ಸವ ವೀಕ್ಷಿಸಿ ಸಂತಸವಾಗಿದೆ. ನಾಡಿನ ಸುಭೀಕ್ಷೆ, ಸುಖ, ಶಾಂತಿಗಾಗಿ ಶಾರದಾ ಮಾತೆ ಹಾಗೂ ನವದುರ್ಗೆಯರಲ್ಲಿ ಪ್ರಾರ್ಥಿಸಿದ್ದೇನೆ ಎಂದರು.
ಕೇರಳ ಮತ್ತು ಗೋವಾ ಮಾದರಿಯಲ್ಲಿ ಸಿಆರ್‌ಝಡ್ ನಿಯಮಾವಳಿಗಳನ್ನು ಬದಲಾವಣೆ ಮಾಡುವ ಪ್ರಸ್ತಾಪ ಇದೀಗ ಕೇಂದ್ರ ಸರಕಾರದಲ್ಲಿದೆ. ಸಿಆರ್‌ಜೆಡ್ ನಿಯಮ ಬದಲಾವಣೆಗೆ ಪ್ರಯತ್ನ ನಡೆಯುತ್ತಿದೆ. ಸಿಆರ್‌ಜೆಡ್ ನಿಯಮ ಸಡಿಲಿಸಿ ಪ್ರವಾಸೋದ್ಯಮಕ್ಕೆ ಅವಕಾಶ ನೀಡಬೇಕಿದೆ. ಕರಾವಳಿಯಲ್ಲಿ ಬೀಚ್ ಪ್ರವಾಸೋದ್ಯಮಕ್ಕೆ ಉತ್ತಮ ಅವಕಾಶವಿದೆ. ಸಿಆರ್‌ಜೆಡ್ ನಿಯಮ ಸರಳೀಕರಣ ಮಾಡಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು. ಮೀನುಗಾರಿಕೆ ಬಂದರು ಮತ್ತು ವಾಣಿಜ್ಯ ಬಂದರುಗಳ ಅಭಿವೃದ್ಧಿ ಬಗ್ಗೆ ಸರಕಾರದ ಮಟ್ಟದಲ್ಲಿ ನಿರ್ಧಾರ ತೆಗೆದುಕೊಂಡು ಕೇಂದ್ರ ಸರಕಾರಕ್ಕೆ ಡಿಪಿಆರ್ ಸಲ್ಲಿಸಲಾಗುವುದು. ಇದರಲ್ಲಿ ಮಂಗಳೂರಿನ ಎನ್‌ಎಂಪಿಟಿ ಹಾಗೂ ಕಾರವಾರ ಬಂದರುಗಳ ವಿಸ್ತರಣೆ ಯೋಜನೆಯೂ ಅಡಕವಾಗಿರಲಿದೆ ಎಂದು ಸಿಎಂ ತಿಳಿಸಿದರು

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss