ಮಂಗಳೂರು : ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ

ದಿಗಂತ ವರದಿ ಮಂಗಳೂರು:

ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಎ.ಜೆ.ಇನ್ಸಿಟ್ಯೂಟ್ ಆಫ್ ಎಂಜಿನಿಯರ್ ಆ್ಯಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಉದ್ಯೋಗ ಮೇಳಕ್ಕೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್ ಮಾ.3ರ ಗುರುವಾರ (ಇಂದು) ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಂಸತ್ ಸದಸ್ಯ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮೇಯರ್ ಪ್ರೇಮಾನಂದ ಶೆಟ್ಟಿ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಕೌಶಲ್ಯಾಭಿವೃದ್ದಿ ಇಲಾಖೆಯ ಹೇಮಚಂದ್ರ ಮೊದಲಾದವರಿ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!