ಮಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ

ಹೊಸದಿಗಂತ ವರದಿ ಮಂಗಳೂರು:

ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಮಂಗಳವಾರ ಬೆಳಿಗ್ಗೆ ಜಿಲ್ಲಾಡಳಿತ, ಆಯುಷ್ ಇಲಾಖೆ, ನೆಹರು ಯುವ ಕೇಂದ್ರ ಹಾಗೂ ವಿವಿಧ ಯೋಗ ಸಂಘಟನೆಗಳ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಶಾಸಕ ವೇದವ್ಯಾಸ ಕಾಮತ್ ಚಾಲನೆ ನೀಡಿದರು.
ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಅಲೆಮಾರಿ/ಅರೆ ಅಲೆಮಾರಿ‌ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ,
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾಆಯುಷ್ ಅಧಿಕಾರಿ ಡಾ.ಮಹಮ್ಮದ್ ಇಕ್ಬಾಲ್, ನೆಹರು ಯುವ ಕೇಂದ್ರದ ರಘುವೀರ್ ಸೂಟರ್ ಪೇಟೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಪ್ರದೀಪ್ ಡಿಸೋಜಾ ಹಾಗೂ ಇತರ ಗಣ್ಯರು ಭಾಗವಹಿಸಿದ್ದರು.


ಯೋಗ ಗುರು ಗೋಪಾಲಕೃಷ್ಣ ದೇಲಂಪಾಡಿ ಅವರು ಯೋಗಾಸನದ ವಿವಿಧ ಭಂಗಿಗಳನ್ನು ವಿವರಿಸುತ್ತಾ, ಯೋಗಾಭ್ಯಾಸ ಮಾಡಿಸಿದರು.
ಆಯುಷ್ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸೇರಿದಂತೆ ಹಲವು ಯೋಗ ಸಂಘಟನೆಗಳ ಯುವಕ-ಯುವತಿಯರು, ಯೋಗ ಪ್ರಿಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!