ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ನ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಪ್ರಕೃತಿ ಶೆಟ್ಟಿ (20 ವರ್ಷ) ಆತ್ಮಹತ್ಯೆ ಮಾಡಿಕೊಂಡ ಎಂಬಿಬಿಎಸ್ ವಿದ್ಯಾರ್ಥಿನಿ.
ಮಹಿಳಾ ಹಾಸ್ಟೆಲ್ ನ ಆರನೇ ಮಹಡಿಯಿಂದ ಜಿಗಿದು ಪ್ರಕೃತಿ ಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜೀವನದಲ್ಲಿ ಹತಾಶೆ ಉಂಟಾಗಿರುವುದರಿಂದಲೇ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದಾರೆ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.