ಮಂಗಳೂರು ಮಹಾನಗರ ಪಾಲಿಕೆ: ಮೇಯರ್ ಸ್ಥಾನಕ್ಕೆ ಮನೋಜ್ ಹೆಸರು ಅಂತಿಮ

ಹೊಸದಿಗಂತ ವರದಿ,ಮಂಗಳೂರು:

ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಅಭ್ಯರ್ಥಿಗಳ ಹೆಸರುಗಳನ್ನು ಬಿಜೆಪಿ ಅಂತಿಮಗೊಳಿಸಿದೆ.

ಮೇಯರ್ ಅಭ್ಯರ್ಥಿತನಕ್ಕೆ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯರಾಗಿರುವ ಮನೋಜ್ ಕೋಡಿಕಲ್ ಹಾಗೂ ಉಪಮೇಯರ್ ಅಭ್ಯರ್ಥಿತನಕ್ಕೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ ೫೮ರ ಮನಪಾ ಸದಸ್ಯರಾಗಿರುವ ಭಾನುಮತಿ ಪಿ.ಎಸ್. ಅವರನ್ನು ಭಾರತೀಯ ಜನತಾ ಪಾರ್ಟಿ ಆಯ್ಕೆ ಮಾಡಿದೆ.

ಈ ಆಯ್ಕೆ ಪ್ರಕ್ರಿಯೆಯನ್ನು ದ.ಕ. ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಡೆಸಲಾಯಿತು ಎಂದು ಜಿಲ್ಲಾ ಬಿಜೆಪಿ ವಕ್ತಾರ ಅರುಣ್ ಜಿ ಶೇಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!