ಹೊಸದಿಗಂತ ವರದಿ ಮಂಗಳೂರು:
ಮಂಗಳೂರು ಮಹಾನಗರ ಪಾಲಿಕೆಯ 25ನೇ ಅವಧಿಯ ನೂತನ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಮನೋಜ್ ಕುಮಾರ್ ಕೋಡಿಕಲ್ ಹಾಗೂ ಉಪಮೇಯರ್ ಆಗಿ ಬಿಜೆಪಿ ಬೆಂಬಲಿತ ಸದಸ್ಯೆ ಭಾನುಮತಿ ಅವರು ಆಯ್ಕೆಯಾಗಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಇಂದು ನಡೆದ ಚುನಾವಣಾ ಪ್ರಕ್ರಿಯೆಯನ್ನು ಮೈಸೂರು ಪ್ರಾದೇಶಿಕ ಆಯುಕ್ತ ರಮೇಶ್ ಡಿ.ಎಸ್ ಅವರು ನಡೆಸಿಕೊಟ್ಟರು. ಮೇಯರ್ ಹುದ್ದೆಗೆ “ಎಸ್ ಸಿ” ಮೀಸಲಾತಿಯಡಿ ಕಾಂಗ್ರೆಸ್ ಅಭ್ಯರ್ಥಿಗಳು ಇಲ್ಲದ ಕಾರಣ ಮೇಯರ್ ಆಯ್ಕೆ ಅವಿರೋಧವಾಗಿ ನಡೆಯಿತು.
ಉಪಮೇಯರ್ ಹುದ್ದೆಗೆ ಚುನಾವಣೆ ನಡೆದು, 47 ಮತಗಳೊಂದಿಗೆ ಬಿಜೆಪಿ ಅಭ್ಯರ್ಥಿ ಭಾನುಮತಿ ಆಯ್ಕೆಯಾದರು.
ಪಾಲಿಕೆಯಲ್ಲಿ ಪ್ರಸಕ್ತ ಬಿಜೆಪಿ ಆಡಳಿತ ಮುಂದಿನ ವರ್ಷದ ಫೆಬ್ರವರಿ 27 ರವರೆಗೆ ಇರುವ ಕಾರಣದಿಂದ ಸುಮಾರು ಐದೂವರೆ ತಿಂಗಳು ಮಾತ್ರ ಮೇಯರ್ ಉಪಮೇಯರ್ ಅಧಿಕಾರಾವಧಿ ಇರಲಿದೆ.
ಒಟ್ಟು 60 ವಾರ್ಡ್ ಗಳನ್ನು ಹೊಂದಿರುವ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 44 , ಕಾಂಗ್ರೆಸ್ 14 ಮತ್ತು ಎಸ್ ಡಿ ಪಿ ಐ ಎರಡು ಸದಸ್ಯ ಬಲವನ್ನು ಹೊಂದಿದೆ.