ವೇಶ್ಯಾವಾಟಿಕೆ ದಂಧೆ ಪ್ರಕರಣ: 10 ಆರೋಪಿಗಳನ್ನು ಬಂಧಿಸಿದ ಮಂಗಳೂರು ಪೊಲೀಸರು

ಹೊಸದಿಗಂತ ವರದಿ, ಮಂಗಳೂರು:

ನಗರದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಗೆ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು 10 ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಈಗಾಗಲೇ ಮೂವರು ಆರೋಪಿಗಳನ್ನು ಐಟಿಪಿ ಹಾಗೂ ಪೋಕ್ಸೊ ಕಾಯ್ದೆಯನ್ವಯ ಬಂಧಿಸಿ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಮೂವರು ಗ್ರಾಹಕರು ಹಾಗೂ ವ್ಯವಸ್ಥಿತ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ನಾಲ್ವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯೋರ್ವಳು ಈ ವೇಶ್ಯಾವಾಟಿಕೆ ದಂಧೆಯಲ್ಲಿ ಸಿಲುಕಿಕೊಂಡಿರುವುದು ಆಕೆಯ ಕಾಲೇಜಿ ಮುಖ್ಯಸ್ಥರಿಗೆ ತಿಳಿದ ಬಳಿಕ ಈ ಪ್ರಕರಣ ಬಹಿರಂಗಗೊಂಡಿತ್ತು. ಆರೋಪಿಗಳು ಈಕೆಗೆ ಬೆದರಿಕೆ, ಆಮಿಷಗಳನ್ನೊಡ್ಡಿ ವೇಶ್ಯಾವಾಟಿಕೆ ದಂಧೆಗೆ
ಬಳಸಿಕೊಂಡಿದ್ದಾರೆ. ಈಕೆಯನ್ನು ಆರೋಪಿಗಳು 2-3 ತಿಂಗಳುಗಳ ಕಾಲ ಸುಮಾರು ಆರು ಬಾರಿ ಲೈಂಗಿಕ ಕ್ರಿಯೆಗೆ ಬಳಸಿಕೊಂಡಿದ್ದಾರೆಂದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ.
ಈಗಾಗಲೇ ಈಕೆಯ ಮೇಲೆ ಕೃತ್ಯ ಎಸಗಿರುವ ಪ್ರಕರಣದಲ್ಲಿ ಪೊಕ್ಸೊ ಹಾಗೂ ಐಟಿಪಿ ಆ್ಯಕ್ಟ್ ಮೇಲೆ ಪ್ರಕರಣ ದಾಖಲಾಗಿತ್ತು. ಇದೀಗ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಮತ್ತೆ ಹೆಚ್ಚುವರಿ ನಾಲ್ಕು ಪೊಕ್ಸೊ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!