ಮಂಗಳೂರು ವಿವಿ ಫಲಿತಾಂಶ ಹತ್ತು ದಿನದೊಳಗಾಗಿ ಪ್ರಕಟ: ಸಚಿವ ಅಶ್ವತ್ಥನಾರಾಯಣ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು ವಿ.ವಿ.ಪದವಿ ತರಗತಿಗಳ ಪ್ರಥಮ ಸೆಮಿಸ್ಟರ್ ಫಲಿತಾಂಶ ಹತ್ತು ದಿನದೊಳಗಾಗಿ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಶೂನ್ಯ ವೇಳೆಯಲ್ಲಿ ಶಾಸಕ ಯು.ಟಿ. ಖಾದರ್ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿ ಸಚಿವರು ಮಾತನಾಡಿ, ಮಂಗಳೂರು ವಿ.ವಿ.ಯ ಮೊದಲ ಸೆಮಿಸ್ಟರ್ ಫಲಿತಾಂಶ ಇದುವರೆಗೂ ಪ್ರಕಟವಾಗಿರುವುದಿಲ್ಲ. ವಿದ್ಯಾರ್ಥಿ ವೇತನ ಪಾವತಿಗೆ ಹಿಂದಿನ ವರ್ಷದ ಅಂಕಪಟ್ಟಿ ಕೇಳಲಾಗುತ್ತದೆ. ಹೀಗಾಗಿ ವಿದ್ಯಾರ್ಥಿ ವೇತನಕ್ಕೆ ಅಜಿ ಸಲ್ಲಿಸಲೂ ಸಾಧ್ಯವಾಗುತ್ತಿಲ್ಲ. ಈ ಹಿಂದೆ ಮಂಗಳೂರು ವಿವಿಯು ನ್ಯಾಕ್ ‘ಎ’ ಗ್ರೇಡ್‍ನಲ್ಲಿತ್ತು. ಈಗ ‘ಬಿ’ ಗ್ರೇಡ್‍ಗೆ ಬಂದಿದೆ. ವಿರ್ಶವವಿದ್ಯಾಲಯದ ಗುಣಮಟ್ಟ ಪುನಃ ಉತ್ತಮಪಡಿಸಲು ಕ್ರಮವಹಿಸಬೇಕು ಎಂದು ಶಾಸಕ ಯು.ಟಿ.ಖಾದರ್ ಒತ್ತಾಯಿಸಿದರು.
ಅದಕ್ಕೆ ಪ್ರತಿಕ್ರಿಯಿಸಿದ ಸಚಿವರು, 10 ದಿನದೊಳಗೆ ವಿ.ವಿ.ಪದವಿ ತರಗತಿಗಳ ಪ್ರಥಮ ಸೆಮಿಸ್ಟರ್ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!