ಮಂಗಳೂರಿನಲ್ಲಿ 3,163 ಕೋ.ರೂ.ವೆಚ್ಚದ 15 ರಾ.ಹೆ. ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೊಸದಿಗಂತ ವರದಿ,ಮಂಗಳೂರು:

ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಅವರು ಮಂಗಳೂರಿನಲ್ಲಿ ಸೋಮವಾರ 3,163 ಕೋಟಿ ರೂ.ಗಳ ವೆಚ್ಚದ 164 ಕಿ.ಮೀ ಉದ್ದದ 15 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಕೋಲಾರ ಸಂಸದ ಮುನಿಸ್ವಾಮಿ,ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜಾ, ರಾಜೇಶ್  ನಾಯಕ್, ಸಂಜೀವ ಮಠಂದೂರು, ಕಾರವಾರದ ಶಾಸಕಿ ರೂಪಾಲಿ ಸಂತೋಷ್ ನಾಯಕ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸುದರ್ಶನ ಎಂ. ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!