ಮಂಗಳೂರಿನಲ್ಲಿ ಸರಣಿ ಹತ್ಯೆ: ಸೋಷಿಯಲ್ ಮೀಡಿಯಾಗಳ ಮೇಲೆ ಪೊಲೀಸರ ಹದ್ದಿನ ಕಣ್ಣು

ಹೊಸದಿಗಂತ ಡಿಜಿಟಲ್‌ ಡೆಸ್ಕ್

ಮಂಗಳೂರಿನಲ್ಲಿ ಸರಣಿ ಹತ್ಯೆಯ ಬಳಿಕ ಸೋಷಿಯಲ್ ಮೀಡಿಯಾಗಳ ಮೇಲೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ.
ಪ್ರಚೋದನಕಾರಿ ಪೋಸ್ಟ್, ಭಾಷಣದ ವೀಡಿಯೋ ಹಾಕಿದ್ರೇ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಟ್ವಿಟ್ ಮಾಡಿರುವಂತ ಅವರು, ಕೆಲವು ಅಂಶಗಳು ಸಾಮಾಜಿಕ ಮಾಧ್ಯಮದಲ್ಲಿ ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುತ್ತಿರುವುದನ್ನು ಗಮನಿಸಲಾಗಿದೆ ಎಂದಿದ್ದಾರೆ.

ನಾವು ಪ್ರಚೋದನಕಾರಿ ಪೋಸ್ಟ್, ವೀಡಿಯೋಗಳ ಬಗ್ಗೆ ಹದ್ದಿನ ಕಣ್ಣು ನೆಟ್ಟಿದ್ದೇವೆ. ನಾವು ಅಂತಹುಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಈಗಾಗಪ್ರಚೋದನಕಾರಿ ಭಾಷಣ ಮಾಡಿದ ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!