ನಾಲ್ಕು ವರ್ಷಗಳ ಬಿಕಾಂ ಕೋರ್ಸ್‌ಗೆ ಮಂಗಳೂರು ವಿಶ್ವವಿದ್ಯಾಲಯ ಅನುಮೋದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಲ್ಕು ವರ್ಷಗಳ ಬಿಕಾಂ ಕೋರ್ಸ್‌ಗೆ ಮಂಗಳೂರು ವಿಶ್ವವಿದ್ಯಾಲಯ ಅನುಮೋದನೆ ನೀಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ಅಕಾಡೆಮಿಕ್ ಕೌನ್ಸಿಲ್ ಸಭೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗುವ ನಾಲ್ಕು ವರ್ಷಗಳ ಬಿಕಾಂ ಇನ್ ಬ್ಯುಸಿನೆಸ್ ಡೇಟಾ ಅನಾಲಿಟಿಕ್ಸ್ ಕೋರ್ಸ್‌ಗೆ ಅನುಮೋದನೆ ನೀಡಲಾಗಿದೆ.

ಅಕಾಡೆಮಿಕ್ ಕೌನ್ಸಿಲ್ ಸಭೆಯ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಪಿ.ಎಸ್ ಯಡಪಡಿತ್ತಾಯ ಅವರು ವಹಿಸಿದ್ದರು. ಮೊದಲ ಮತ್ತು ಎರಡನೇ ಸೆಮಿಸ್ಟರ್ ಪಠ್ಯಕ್ರಮಗಳನ್ನು ಅನುಮೋದಿಸಲಾಗಿದೆ.

ಇದರ ಜತೆಗೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರದ ಸಂಸ್ಥೆಗೆ ಸಂಬಂಧಿಸಿದ ಎರಡು ಕರಡು ಕಾಯಿದೆಗೆ ಅನುಮೋದನೆ ನೀಡಲಾಗಿದೆ. ಅರೆಭಾಷೆ ಮತ್ತು ಸಂಸ್ಕೃತಿಯನ್ನು ಉತ್ತೇಜಿಸಲು ಅರೆಭಾಷೆ ಸಂಶೋಧನ ಕೇಂದ್ರ ಸ್ಥಾಪನೆಗೆ ಅನುದಾನ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!