Tuesday, March 28, 2023

Latest Posts

ಮಂಗಳೂರು ವಿಶ್ವವಿದ್ಯಾನಿಲಯ ಘಟಿಕೋತ್ಸವ: ಪ್ರೊ.ಎಂ.ಬಿ.ಪುರಾಣಿಕ್ ಸಹಿತ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್

ಮಂಗಳೂರು ವಿಶ್ವವಿದ್ಯಾನಿಲಯದ 41ನೇ ಘಟಿಕೋತ್ಸವದಲ್ಲಿ ಶಿಕ್ಷಣ ಮತ್ತು ಸಮಾಜ ಸೇವಾ ಕ್ಷೇತ್ರದ ಸಾಧನೆಗಾಗಿ ಪ್ರೊ.ಎಂ.ಬಿ.ಪುರಾಣಿಕ್, ಯು.ಕೆ.ಮೋನು ಹಾಗೂ ಉದ್ಯಮಿ ಜಿ.ರಾಮಕೃಷ್ಣ ಆಚಾರ್ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಾಪತಿಗಳು ಮತ್ತು ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.

ಇದೇ ವೇಳೆ ಘಟಿಕೋತ್ಸವದಲ್ಲಿ 115 ಮಂದಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. 55 ಚಿನ್ನದ ಪದಕ, 57 ನಗದು ಬಹುಮಾನವನ್ನು ನೀಡಿ ಪುರಸ್ಕರಿಸಲಾಯಿತು. ಪ್ರಥಮ ರ್‍ಯಾಂಕ್ ಪಡೆದ 71 ವಿದ್ಯಾರ್ಥಿಗಳಿಗೆ ರ್‍ಯಾಂಕ್ ಪ್ರಮಾಣ ಪತ್ರ ನೀಡಲಾಯಿತು.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ, ಕುಲಸಚಿವ ಪ್ರೊ.ಕಿಶೋರ್‌ಕುಮಾರ್ ಕೆ.ಸಿ, ಪರೀಕ್ಷಾಂಗ ಕುಲಸಚಿವ ಪ್ರೊ.ರಾಜು ಕೃಷ್ಣ ಚಲಣ್ಣವರ, ಸಿಂಡಿಕೇಟ್ ಮತ್ತು ವಿದ್ಯಾ ವಿಷಯಕ ಪರಿಷತ್ತು ಸದಸ್ಯರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!