ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿದೆ 25 ಐಸೋಲೇಶನ್ ಬೆಡ್: ಸುಮ್ನೆ ಎಂತಕೆ ಕೋವಿಡ್ ಟೆನ್ಷನ್?

ಹೊಸದಿಗಂತ ವರದಿ ಮಂಗಳೂರು:

ಈಗ ವಿಶ್ವವ್ಯಾಪಿ ಆತಂಕ ಹುಟ್ಟಿಸಿರುವ ಕೋವಿಡ್ ಕುರಿತು ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಅಲರ್ಟ್ ಆಗಿದ್ದು, ಜನತೆ ಸದ್ಯ ಯಾವುದೇ ರೀತಿಯ ಭಯಪಡುವ ಆವಶ್ಯಕತೆಯೇ ಇಲ್ಲದಂತೆ ಆಡಳಿತ ಎಲ್ಲಾ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಿದೆ.

ಈ ನಡುವೆ ಸೌದಿ ಅರೆಬಿಯಾ ದೇಶದಿಂದ ಬೆಂಗಳೂರಿಗೆ ವಿಮಾನದ ಮೂಲಕ ಆಗಮಿಸಿದ್ದ ಮಂಗಳೂರು ಮೂಲದ ವ್ಯಕ್ತಿಯೋರ್ವರಲ್ಲಿ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನಲ್ಲಿ ಹೋಮ್ ಕ್ವಾರಂಟೈನ್‌ಗೆ ಒಳಪಡಿಸಲಾಗಿದ್ದು, ಜಿಮೋ ಮಿಕ್ ಸೀಕ್ವೆನ್ಸಿಂಗ್ ಪ್ರಯೋಗಾಲಯದ ವರದಿಗಾಗಿ ಕಾಯಲಾಗುತ್ತಿದೆ. ಈ ನಡುವೆ ಮಂಗಳವಾರ ಮತ್ತೆ ಒಂದು ಕೋವಿಡ್ ಕಾಣಿಸಿಕೊಳ್ಳುವ ಮೂಲಕ ಜಿಲ್ಲೆಯಲ್ಲಿ ಆತಂಕ ಇನ್ನೂ ದೂರವಾಗಿಲ್ಲ ಎಂಬುದು ಸ್ಪಷ್ಟವಾಗಿದೆ.
ಐಸೊಲೇಶನ್ ವಾರ್ಡ್ ರೆಡಿ!

ಸಂಭಾವ್ಯ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸರ್ವ ಸನ್ನದ್ಧವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವೆನ್ಲಾಕ್ ಆಸ್ಪತ್ರೆಯಲ್ಲಿ 25 ಹಾಸಿಗೆ ಯ ಐಸೊಲೇಶನ್ ವಾರ್ಡ್ ಸಿದ್ದಗೊಳಿಸಿದೆ. ಇದು ಜಿಲ್ಲೆಯ ರೋಗಿಗಳಿಗೆ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ ಕೋವಿಡ್ ಲಕ್ಷಣ ಕಂಡು ಬಂದರೂ ಅವರನ್ನು ಪ್ರತ್ಯೇಕಿಸುವ ನಿಟ್ಟಿನಲ್ಲಿ ನೆರವಾಗಲಿದೆ.

ಜನತೆಯೂ ಕೋವಿಡ್ ಬಗ್ಗೆ ಎಚ್ಚರಿಕೆ ವಹಿಸಬೇಕಿದ್ದು, ಜಿಲ್ಲಾಡಳಿತದ ಶ್ರಮಕ್ಕೆ ಸಾಥ್ ನೀಡಬೇಕಾಗಿದೆ.
ಒಟ್ಟು ಪ್ರಯಾಣಿಕರ ಪೈಕಿ ಈಗ 2% ಮಾತ್ರ ಟೆಸ್ಟ್! ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರ ಪೈಕಿ ಕೇವಲ 2 ಶೇಕಡ ಪ್ರಯಾಣಿಕರನ್ನು ಮಾತ್ರ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈ ವೇಳೆ ಕೋವಿಡ್ ದೃಢಪಟ್ಟರೆ ಮಾದರಿಯನ್ನು ಜಿಮೋ ಮಿಕ್ ಸೀಕ್ವೆನ್ಸಿಂಗ್ ಪ್ರಯೋಗಾಲಕ್ಕೆ ರವಾನಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!