Friday, September 22, 2023

Latest Posts

ತುಳು ಭಾಷೆಯಲ್ಲಿ ಮೊದಲ ಪಿಎಚ್‌ಡಿ ಗಳಿಸಿದ ಮಂಗಳೂರಿನ ಡಾ ವಿ.ಕೆ. ಯಾದವ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರಿನ ಡಾ ವಿ.ಕೆ. ಯಾದವ್ ತುಳು ಭಾಷೆಯಲ್ಲಿ ಪಿಎಚ್‌ಡಿ ಪಡೆದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮಂಗಳೂರಿನ ಸಸಿಹಿತ್ಲುವಿನ ಯಾದವ್ ಅವರು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರು. ಇವರು ಆಂಧ್ರಪ್ರದೇಶದ ಕುಪ್ಪಂನ ದ್ರಾವಿಡ ವಿಶ್ವವಿದ್ಯಾಲಯದಲ್ಲಿ ತಮ್ಮ ಸಂಶೋಧನಾ ಅಧ್ಯಯನವನ್ನು ಪ್ರಕಟಿಸಿದ್ದಾರೆ.

ಮೊಗವೀರರ ಸಾಂಸ್ಕೃತಿಕ ಬದ್ಕ್ ಬೊಕ್ಕ ಆರ್ಥಿಕ ಚಿಂತನೆ ಅಂದರೆ ಮೊಗವೀರ ಸಮುದಾಯದ ಸಾಂಸ್ಕೃತಿಕ ಮತ್ತು ಆರ್ಥಿಕ ಚಿಂತನೆಗಳು ಎನ್ನುವ ವಿಷಯದ ಬಗ್ಗೆ ಅಧ್ಯಯನ ನಡೆಸಿದ್ದಾರೆ.

ವಿಶ್ವವಿದ್ಯಾಲಯದ ತುಳು ಅಧ್ಯಯನ ವಿಭಾಗದ ಮುಖ್ಯಸ್ಥ ಡಾ ಜಿ.ಎಸ್. ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಪಿಎಚ್‌ಡಿ ಪೂರ್ಣಗೊಳಿಸಿದ್ದಾರೆ. ಪುಸ್ತಕ ರೂಪದಲ್ಲಿ ಹೊರತಂದಿರುವ ಈ ಪ್ರಬಂಧವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕ ಎಂ. ಮೋಹನ್ ಆಳ್ವ ಅವರು ಅನಾವರಣಗೊಳಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!