January17, 2026
Saturday, January 17, 2026
spot_img

ಮಂಗಳೂರಿನ ಮಂಗಳಾ ಕ್ರೀಡಾಂಗಣ ಎರಡು ತಿಂಗಳು ಬಂದ್! ಏನ್ ವಿಷ್ಯ? ಇಲ್ಲಿದೆ ನೋಡಿ ಫುಲ್ ಡಿಟೇಲ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಗರದ ನಿತ್ಯ ಜೀವನದ ಭಾಗವಾಗಿರುವ ಮಂಗಳಾ ಕ್ರೀಡಾಂಗಣಕ್ಕೆ ಶೀಘ್ರದಲ್ಲೇ ತಾತ್ಕಾಲಿಕ ವಿರಾಮ ಸಿಗಲಿದೆ. ಬೆಳಗ್ಗೆ ಮತ್ತು ಸಂಜೆ ನಡಿಗೆ, ಜಾಗಿಂಗ್, ದೈಹಿಕ ಅಭ್ಯಾಸಕ್ಕಾಗಿ ನೂರಾರು ಮಂದಿ ಬಳಸುತ್ತಿರುವ ಈ ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಜನವರಿಯಿಂದ 60 ದಿನಗಳ ಕಾಲ ಸಾರ್ವಜನಿಕ ಪ್ರವೇಶವನ್ನು ಸ್ಥಗಿತಗೊಳಿಸಲು ಯುವಜನ ಮತ್ತು ಕ್ರೀಡಾ ಇಲಾಖೆ ತೀರ್ಮಾನಿಸಿದೆ. ಈ ನಿರ್ಧಾರವು ಕ್ರೀಡಾಂಗಣವನ್ನು ಮತ್ತಷ್ಟು ಸುಧಾರಿತವಾಗಿ ರೂಪಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿದೆ.

ಮಂಗಳೂರು ನಗರದ ಪ್ರಮುಖ ಕ್ರೀಡಾ ಕೇಂದ್ರವಾಗಿರುವ ಮಂಗಳಾ ಕ್ರೀಡಾಂಗಣದಲ್ಲಿ 400 ಮೀಟರ್ ಸಿಂಥೆಟಿಕ್ ಟ್ರ್ಯಾಕ್ ಇದೆ. ಅಥ್ಲೆಟಿಕ್ಸ್‌ಗೆ ಸಂಬಂಧಿಸಿದ ಬಹುತೇಕ ಸ್ಪರ್ಧೆಗಳು ಇಲ್ಲಿ ನಡೆಯುತ್ತಿದ್ದು, ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟಗಳಿಗೆ ಇದು ಯೋಗ್ಯ ವೇದಿಕೆಯಾಗಿದೆ.

ಸರ್ಕಾರ ಕ್ರೀಡಾಂಗಣ ಅಭಿವೃದ್ಧಿಗೆ ಮೂರು ಕೋಟಿ ರೂಪಾಯಿ ಅನುದಾನವನ್ನು ಮಂಜೂರು ಮಾಡಿದ್ದು, ಇದರಡಿ ಮೂರನೇ ಹಂತದ ಕಾಮಗಾರಿ ಆರಂಭಗೊಳ್ಳಲಿದೆ. ಈ ಹಂತದಲ್ಲಿ ಸಿಂಥೆಟಿಕ್ ಟ್ರ್ಯಾಕ್ ದುರಸ್ತಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಟ್ರ್ಯಾಕ್‌ನಲ್ಲಿರುವ ಹಾನಿಗೊಂಡ ಭಾಗಗಳನ್ನು ಸರಿಪಡಿಸಿ ಕ್ರೀಡಾಪಟುಗಳಿಗೆ ಸುರಕ್ಷಿತ ವಾತಾವರಣ ಒದಗಿಸಲಾಗುತ್ತದೆ. ಜೊತೆಗೆ ಸುತ್ತಲೂ ವಾಕಿಂಗ್ ಪಾಥ್, ಪೆನ್ಸಿಂಗ್ ಮತ್ತು ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆಯೂ ಇದೆ.

Must Read

error: Content is protected !!