ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್ ಮೇಲೆ ಹಮಾಸ್ ಉಗ್ರರು ಭೀಕರ ದಾಳಿ ನಡೆಸುತ್ತಿದ್ದು, ಈಗಾಗಲೇ ಯುದ್ಧದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಂಗಳೂರಿನ ವ್ಯಕ್ತಿಯೊಬ್ಬ ಮಾತನಾಡಿದ್ದು, ಸಾಮಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
ಉಗ್ರರನ್ನು ಬೆಂಬಲಿಸಿ ಮಂಗಳೂರಿನ ಝಾಕಿರ್ ಮಾತನಾಡಿದ್ದು, ಹಮಾಸ್ ಉಗ್ರರು ದೇಶ ಪ್ರೇಮಿಗಳು ಎಂದಿದ್ದಾನೆ. ಪ್ಯಾಲೆಸ್ತೀನ್, ಗಾಜಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲಿ, ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ ಸಲ್ಲಿಸಬೇಕು ಎಂದಿದ್ದಾನೆ.
ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಭಾರೀ ವಿರೋಧ ವ್ಯಕ್ತವಾಗಿದೆ. ಹಿಂದೂ ಸಂಘಟನೆಗಳು ಈ ವಿಡಿಯೋವನ್ನು ವಿರೋಧಿಸಿ ಶೀಘ್ರವೇ ಆತನನ್ನು ಬಂಧಿಸಿ ಎಂದು ಒತ್ತಾಯಿಸಿವೆ.