ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರಿನ ಕೋಟೆಕಾರ್ ಬ್ಯಾಂಕ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರ ಮೇಲೆ ದಾಳಿಗೆ ಯತ್ನಿಸಿದ ದರೋಡೆಕೋರನ ಮೇಲೆ ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ.
ತಲಪಾಡಿಯ ಅಲಂಕಾರು ಗುಡ್ಡದಲ್ಲಿ ಘಟನೆ ನಡೆದಿದೆ. ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ಯತ್ನ ಹಿನ್ನೆಲೆ ಆರೋಪಿ ಕಣ್ಣನ್‌ಮಣಿ ಕಾಲಿಗೆ ಫೈರಿಂಗ್ ಮಾಡಲಾಗಿದೆ.
ಸೋಮವಾರ ತಮಿಳುನಾಡಿನ ತಿರುವನ್ವೇಲಿ ಬಳಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇಂದು ತಮಿಳುನಾಡಿನಿಂದ ಆರೋಪಿಗಳನ್ನ ಮಂಗಳೂರಿನ ಕೆ.ಸಿ.ರೋಡ್ಗೆ ಮಹಜರು ಮಾಡಲು ಕರೆತರಲಾಗುತ್ತಿತ್ತು.
ಮುರುಗನ್ ಡಿ. ದೇವರ್, ಯೋಶುವಾ ರಾಜೇಂದ್ರನ್, ಕಣ್ಣನ್ ಮಣಿಯನ್ನ ನಿನ್ನೆ ತಮಿಳುನಾಡಿನ ತಿರುವನ್ವೇಲಿಯಲ್ಲಿ ಬಂಧಿಸಿದ್ದ ಪೊಲೀರು ಇಂದು ರಾಜ್ಯಕ್ಕೆ ಕರೆದುಕೊಂಡು ಬರುತ್ತಿದ್ದರು. ಆದರೆ ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿ ಅಲಂಕಾರು ಗುಡ್ಡ ಬಳಿ ಆರೋಪಿ ಕಣ್ಣನ್‌ಮಣಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದ. ಈ ವೇಳೆ ಇನ್ಸ್‌ಪೆಕ್ಟರ್ ಆರೋಪಿ ಮೇಲೆ ಫೈರಿಂಗ್ ಮಾಡಿದ್ದಾರೆ. ಸದ್ಯ ಆತನನ್ನ ದೇರಳಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಉಳ್ಳಾಲ ಇನ್ಸ್ ಪೆಕ್ಟರ್ ಸೇರಿ ಮೂವರಿಗೆ ಗಾಯವಾಗಿದೆ. ಸಂಜೆ 4.20ರ ವೇಳೆ ತಲಪಾಡಿ ಅಲಂಗಾರು ಗುಡ್ಡೆ ಬಳಿ ಪೊಲೀಸರು ಮಹಜರಿಗೆ ಕರೆ ತಂದಿದ್ದರು. ಈ ವೇಳೆ ಬಿಯರ್ ಬಾಟಲಿಯಿಂದ ಸಿಸಿಬಿ ಸಿಬ್ಬಂದಿ ಅಂಜನಪ್ಪ ಹಾಗೂ ಉಳ್ಳಾಲ ಠಾಣೆ ಸಿಬ್ಬಂದಿ ನಿತಿನ್ ಮೇಲೆ ಆರೋಪಿಗಳು ದಾಳಿ ಮಾಡಿದ್ದಾರೆ. ತಡೆಯಲು ಬಂದ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ಮೇಲೂ ದಾಳಿ ಮಾಡಿದ್ದು, ಆಗ ಸ್ಥಳದಲ್ಲೇ ಇದ್ದ ಸಿಸಿಬಿ ಇನ್ಸ್ ಪೆಕ್ಟರ್ ರಫೀಕ್ರಿಂದ ಕಣ್ಣನ್ ಕಾಲಿಗೆ ಫೈರಿಂಗ್ ಮಾಡಿದ್ದಾರೆ.