ಹೊಸದಿಗಂತ ಡಿಜಿಟಲ್ ಡೆಸ್ಕ್:
7ನೇ ವರ್ಷದ ಮಂಗಳೂರು ಸಾಹಿತ್ಯ ಉತ್ಸವ (ಲಿಟ್ ಫೆಸ್ಟ್)ಕ್ಕೆ ಮಂಗಳೂರಿನ ಟಿ.ಎಂ.ಎ. ಪೈ ಸಭಾಂಗಣದಲ್ಲಿ ಅದ್ದೂರಿ ಚಾಲನೆ ಸಿಕ್ಕಿತು.
ಕಾರ್ಯಕ್ರಮವನ್ನು ಖ್ಯಾತ ಲೇಖಕ, ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯು ಎಲ್ಲಾ ಕ್ಷೇತ್ರಗಳಲ್ಲಿ ದೇಶಕ್ಕೆ ಮಾದರಿಯಾಗಿದೆ. ಉತ್ಸವದಲ್ಲಿ ದೇಶದಾದ್ಯಂತದ ಸಾಧಕರನ್ನು ಆಹ್ವಾನಿಸಿ, ವಿವಿಧ ವೇದಿಕೆಗಳ ಮೂಲಕ ಚರ್ಚೆ ಮಂಟಪಗಳನ್ನು ಏರ್ಪಡಿಸುತ್ತಿರುವುದನ್ನು ಪ್ರಶಂಸಿಸಿದರು.
ಉತ್ಸವದಲ್ಲಿ ಚರ್ಚಿಸಲ್ಪಟ್ಟ ವಿಷಯಗಳು ಬೇಕಾದವರಿಗೆ ತಲುಪುತ್ತಿವೆಯೇ, ನೀವು ನಿರೀಕ್ಷಿಸಿರುವ ಪರಿಣಾಮ ಸಾಧಿಸುತ್ತಿದೆಯೇ ಎಂಬ ಆತ್ಮವಿಶ್ವಾಸ ಅತ್ಯಗತ್ಯ ಎಂದರು.
ಲಿಟ್ ಫೆಸ್ಟ್ ಯಾಂತ್ರಿಕತೆಯೊಳಗೆ ಸಿಲುಕದೆ, ವರ್ಷದಿಂದ ವರ್ಷಕ್ಕೆ ಹೊಸತನವನ್ನು ಉಳಿಸಿಕೊಂಡು ತನ್ನ ಗುರಿಯನ್ನು ಸಾಧಿಸುತ್ತಿರುವುದನ್ನು ಮೆಚ್ಚುಗೆ ವ್ಯಕ್ತಪಡಿಸಿದರು.
ಮಿಥಿಕ್ ಸೊಸೈಟಿಯ ಗೌರವ ಕಾರ್ಯದರ್ಶಿ ಡಾ. ರವಿ ಮುಖ್ಯ ಅತಿಥಿಗಳಾಗಿ ವೇದಿಕೆಯನ್ನು ಅಲಂಕರಿಸಿದರು.
ಭಾರತ್ ಫೌಂಡೇಶನ್ ಟ್ರಸ್ಟ್‌ನ ಪ್ರತಿನಿಧಿ ಸುನಿಲ್ ಕುಲ್ಕರ್ಣಿ ಸ್ವಾಗತಿಸಿದರು.