ಮಂಗನಬಾವು ಸೋಂಕು 125ಕ್ಕೆ ಏರಿಕೆ : ಶಾಲೆಗೆ 3 ದಿನ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಇಂದಿರಾಗಾಂಧಿ ವಸತಿ ನಿಲಯದ ಮಕ್ಕಳಲ್ಲಿ ಮಂಗನಬಾವು ಸೋಂಕು ಉಲ್ಬಣಿಸಿದ್ದು, ಸೋಂಕಿತರ ಸಂಖ್ಯೆ 125ಕ್ಕೆ ಏರಿಕೆಯಾಗಿದೆ.

ಈ ಹಿನ್ನೆಲೆಯಲ್ಲಿ ಮುಂಡಗೋಡು ಇಂದಿರಾಗಾಂಧಿ ವಸತಿ ಶಾಲೆಗೆ ಮೂರು ದಿನ ರಜೆ ಘೋಷಣೆ ಮಾಡಲಾಗಿದೆ.ಇಂದಿರಗಾಂಧಿ ವಸತಿ ನಿಲಯದಲ್ಲಿ ಒಟ್ಟು 210 ಮಕ್ಕಳಿದ್ದಾರೆ. ನ.16 ರಂದು ಐದು ವಿದ್ಯಾರ್ಥಿಗಳಲ್ಲಿ ಮಾತ್ರ ಸೋಂಕು ಕಾಣಿಸಿತ್ತು. ಅದಾದ ಮೂರು ದಿನದಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಈ ಸೋಂಕು ಕಾಣಿಸಿಕೊಂಡಿತ್ತು. ಇದೀಗ 125 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ.

ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಿದ್ದಂತೆ ವೈದ್ಯಕೀಯ ತಂಡವೊಂದನ್ನು ಮುಂಡಗೋಡು ವಸತಿ ನಿಲಯಕ್ಕೆ ನಿಯೋಜನೆ ಮಾಡಲಾಗಿದ್ದು, ರಕ್ತ ಮಾದರಿ ಪರೀಕ್ಷೆಗೆ ಕಳುಹಿಸಲಾಗಿದೆ

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!