ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೆನಾಡಿನಲ್ಲಿ ಮತ್ತೆ ಮಂಗನಕಾಯಿಲೆ ಪತ್ತೆಯಾಗಿದ್ದು, ಕೊಪ್ಪದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಸೋಂಕು ಕಾಣಿಸಿದೆ.
ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆ ವ್ಯಕ್ತಿಯ ಸ್ಯಾಂಪಲ್ನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇಲ್ಲಿ ಕೆಎಫ್ಡಿ ಇರುವುದು ದೃಢಪಟ್ಟಿದೆ. ಮಲೆನಾಡಿನಲ್ಲಿ ಮತ್ತೆ ಮಂಗನಕಾಯಿಲೆ ಭೀತಿ ಎದುರಾಗಿದ್ದು, ಚಿಕ್ಕಮಗಳೂರಿನಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್ ಕೈಗೊಂಡಿದೆ.